News Karnataka Kannada
Saturday, April 20 2024
Cricket
ವಿದೇಶ

ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

Photo Credit :

ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಕಾಸರಗೋಡು: ಕೇರಳ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು ಕಾಸರಗೋಡು, ಕಣ್ಣೂರು, ಮಲಪ್ಪುರಂ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಕೋಟ್ಟಯಂ, ತ್ರಿಶೂರ್, ಕೋಯಿಕ್ಕೋಡ್, ಎರ್ನಾಕುಲಂ, ವಯನಾಡ್‌ ಹಾಗೂ ಪಾಲಕ್ಕಾಡ್‌ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ತಿರುವನಂತಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

‘ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕೇರಳದ ಪಶ್ಚಿಮ ಕರಾವಳಿಯಲ್ಲಿ ಮುಂದಿನ ಕೆಲವು ದಿನಗಳ ವರೆಗೆ ತೀವ್ರವಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕೆಲವು ಪ್ರದೇಶಗಳಲ್ಲಿ ಗಾಳಿ, ಮಳೆ ವ್ಯಾಪಕವಾಗಿರಲಿದೆ’ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು