News Karnataka Kannada
Wednesday, April 17 2024
Cricket
ವಿದೇಶ

ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ; ಮೇ 8ರಿಂದ ಜಾರಿ

Photo Credit :

ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್  ; ಮೇ 8ರಿಂದ ಜಾರಿ

ತಿರುವನಂತಪುರಂ, ; ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೇರಳದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಕೋವಿಡ್ ಹರಡುವಿಕೆ ತಡೆಯಲು ಕೇರಳ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ.
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರ ಬೆಳಗ್ಗೆ 6 ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ..

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು