News Karnataka Kannada
Wednesday, April 17 2024
Cricket
ವಿದೇಶ

ಕೊಡಗಿನಲ್ಲಿ ಕಾಡಾನೆಗಳ ಧಾಳಿ ; ಬೆಳೆ ನಾಶ

Photo Credit :

ಕೊಡಗಿನಲ್ಲಿ ಕಾಡಾನೆಗಳ ಧಾಳಿ ; ಬೆಳೆ ನಾಶ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕಾಫಿ, ಬಾಳೆ ತೋಟಗಳಿಗೆ ನುಗ್ಗಿ ಫಸಲನ್ನು ತಿಂದು ನಾಶಪಡಿಸುತ್ತಿದೆ.
ಕಳೆದ ರಾತ್ರಿ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದ ಕೆ.ಡಿ ಗಿರೀಶ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಕಾಫಿ ಗಿಡಗಳನ್ನು ಹಾಗೂ ಫಸಲು ಬಿಟ್ಟಿದ್ದ ಬಾಳೆ ಗಿಡಗಳನ್ನು ನಾಶ ಪಡಿಸಿವೆ. ಅಲ್ಲದೆ ಅಕ್ಕಪಕ್ಕದ ಗ್ರಾಮಸ್ಥರ ಕಾಫಿಗಿಡ, ಬಾಳೆ, ರಾಸಾಯನಿಕ ಗೊಬ್ಬರ ತುಂಬಿದ ಚೀಲಗಳನ್ನು ಹಾಳುಗೆಡವಿ ಸಾಕಷ್ಟು ನಷ್ಟ ಉಂಟಾಗುವಂತೆ ಮಾಡಿದೆ. ಕೆಲ ದಿನಗಳಿಂದ ಗ್ರಾಮದಲ್ಲಿ ಕಾಣಿಸಿಕೊಂಡಿರುವ 4 ರಿಂದ 5 ಆನೆಗಳಿರುವ ಹಿಂಡು, ಕೂತಿ ಮತ್ತು ನಗರಳ್ಳಿ ಭಾಗದಲ್ಲಿ ಸಂಚರಿಸುತ್ತಿವೆ. ಇದಲ್ಲದೇ ಜಿಲ್ಲೆಯ ಹಲವು ಜನರ ಪ್ರಾಣವನ್ನು ಕೂಡ ಆನೆ ಬಲಿ ಪಡೆದಿದೆ. ಮಾಲೀಕರು ಹಾಗೂ ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿರಂತರ ದಾಳಿ ನಡೆಸುವ ಆನೆಗಳನ್ನು ಕಾಡಿಗಟ್ಟಬೇಕೆಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ. ಈ ಹಿಂದೆ ಹಲವು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರೂ ಕೂಡ ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ವಿಫಲವಾಗಿದ್ದಾರೆ ಎಂದು ದೂರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು