News Karnataka Kannada
Friday, April 19 2024
Cricket
ವಿದೇಶ

ಕೊರೊನಾ: ದೇಶದಲ್ಲಿ 94,372 ಹೊಸ ಪ್ರಕರಣ ಪತ್ತೆ

Photo Credit :

ಕೊರೊನಾ: ದೇಶದಲ್ಲಿ 94,372 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಶನಿವಾರ 94,372 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕಳೆದ ಕೆಲ ದಿನಗಳಿಂದ ನಿತ್ಯ 90,000ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಇನ್ನು 3 ದಿನಗಳಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷ ಗಡಿ ದಾಟುವುದು ಖಚಿತವಾಗಿದೆ. ಪ್ರಸ್ತುತ ದೇಶದಲ್ಲಿ ಸೋಂಕಿತರ ಸಂಖ್ಯೆ 47,54,357ಕ್ಕೆ ತಲುಪಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,114 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಈವರೆಗೆ ಮೃತರ ಸಂಖ್ಯೆ 78,586ಕ್ಕೆ ಏರಿಕೆಯಾಗಿದೆ. 

ಇನ್ನು 47,54,357 ಮಂದಿ ಸೋಂಕಿತರ ಪೈಕಿ ಈ ವರೆಗೂ 37,02,596 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,73,175 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಹೊಸದಾಗಿ 22,084  ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 391 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ನಿನ್ನೆ ಮತ್ತೆ ಆಂಧ್ರಪ್ರದೇಶದಲ್ಲಿ 9901 (67 ಸಾವು), ಕರ್ನಾಟಕ 9140 (94 ಸಾವು), ಉತ್ತರಪ್ರದೇಶ 6784 (67 ಸಾವು), ಹಾಗೂ ದೆಹಲಿಯಲ್ಲಿ 4321 ಮಂದಿಗೆ ಹೊಸದಾಗಿ ಸೋಂಕು ವ್ಯಾಪಿಸಿದ್ದು, 28 ಮಂದಿ ಬಲಿಯಾಗಿದ್ದಾರೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು