News Karnataka Kannada
Tuesday, April 16 2024
Cricket
ವಿದೇಶ

ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯ

Photo Credit :

ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯ

ಮುದ್ದೇಬಿಹಾಳ: ಎಲ್ಲೆಡೆ ಕೊರೊನಾ ಮಹಾಮಾರಿ ಸೋಂಕು ಹೆಚ್ಚಾಗುತ್ತಿದ್ದು, ಮನೆ ಸದಸ್ಯರೇ ಸೋಂಕಿಗೊಳಗಾದವರನ್ನ ಮುಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ಕೊರೊನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿ ಧೈರ್ಯ ತುಂಬಿದ್ದಾರೆ.

ಕೊರೊನಾ ಪಾಸಿಟಿವ್​ ಇದ್ದರೂ ಹೆರಿಗೆ ಮಾಡಿಸಿ ಧೈರ್ಯ ತುಂಬಿದ ವೈದ್ಯತಾಲೂಕಿನ ಕಾಳಗಿ ಸಮುದಾಯ ಆರೋಗ್ಯ ಕೇಂದ್ರ ಎರಡು ಬಾರಿ ಕಾಯಕಲ್ಪ ಪ್ರಶಸ್ತಿಗೆ ಭಾಜನವಾಗಿದ್ದು, ಹೆರಿಗೆಗೆಂದು ಬರುವ ಗರ್ಭಿಣಿಯರಿಗೆ ಒಳ್ಳೆಯ ಸೌಲಭ್ಯ ಕಲ್ಪಿಸಲಾಗಿದೆ. ಸದ್ಯಕ್ಕೆ ಕೊರೊನಾ ಹಾವಳಿಯಲ್ಲಿ ಹೆರಿಗೆ ಮಾಡಿಸಿಕೊಳ್ಳುವುದು ಸವಾಲಿನ ಕೆಲಸ ಆಗಿದ್ದು, ಸಂದಿಗ್ಧ ಪರಿಸ್ಥಿತಿಯಲ್ಲಿ ವೈದ್ಯರು ತಮ್ಮ ಜೀವ ಪಣಕ್ಕಿಟ್ಟು ಹೆರಿಗೆ ಮಾಡಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ವೈದ್ಯ ಡಾ.ರಂಗನಾಥ ಮಾತನಾಡಿ, ಕರೊನಾ ಸಂದರ್ಭದಲ್ಲಿ ಪಾಸಿಟಿವ್ ಹೊಂದಿರುವ ಗರ್ಭಿಣಿಯರಿಗೆ ವಿಜಯಪುರದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ಮಾಡಲಾಗಿದೆ. ನಮ್ಮಲ್ಲಿ ತಿಂಗಳಿಗೆ 50-60 ಹೆರಿಗೆಗಳು ಆಗುತ್ತವೆ. ಹೆರಿಗೆಗೂ ಮುನ್ನ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ವರದಿ ಗಮನಿಸಿ ಮಹಿಳೆಯ ಪರಿಸ್ಥಿತಿ ಅವಲೋಕಿಸಿ ಹೆರಿಗೆ ಮಾಡಿಸಿಕೊಳ್ಳುತ್ತೇವೆ. ಮೂರು ಜನ ಮಹಿಳೆಯರಿಗೆ ಪಾಸಿಟಿವ್ ಬಂದಿದ್ದರೂ ಹೆರಿಗೆ ಮಾಡಿಸಿಕೊಳ್ಳಲಾಗಿದೆ ಎಂದರು.ಕೊರೊನಾ ಸಂದರ್ಭದಲ್ಲಿ ಗರ್ಭಿಣಿಯರು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳೇನು ಎಂಬುದರ ಬಗ್ಗೆಯೂ ವೈದ್ಯ ಡಾ.ರಂಗನಾಥ್​ ತಿಳಿಸಿದ್ದು, ಜ್ವರದ ಲಕ್ಷಣಗಳಿರುವ ಕುಟುಂಬದ ಸದಸ್ಯರಿಂದ ಅಂತರ ಕಾಯ್ದುಕೊಂಡು ಇರಬೇಕು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು