News Karnataka Kannada
Wednesday, April 24 2024
Cricket
ವಿದೇಶ

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್​.ಡಿ. ದೇವೇಗೌಡ

Photo Credit :

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್​.ಡಿ. ದೇವೇಗೌಡ

ಬೆಂಗಳೂರು ; ಭಾರತದಲ್ಲಿ ಎರಡನೇ ಸುತ್ತಿನಲ್ಲಿ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17 ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು ಪೀಡಿತರಾಗುತ್ತಿದ್ದಾರೆ. ಈಗ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ. ಹೀಗಾಗಿ ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹೆಚ್​.ಡಿ. ದೇವೇಗೌಡ ಈ ಸಂಬಂಧ ಇಂದು ಟ್ವೀಟ್ ಮಾಡಿದ್ದು, ಆ ಟ್ವೀಟ್​ನಲ್ಲಿ, “ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ನಿಮಿಷಗಳ ಹಿಂದೆ ನನ್ನೊಂದಿಗೆ ಮಾತನಾಡಿದರು, ಅವರು ಕೋವಿಡ್ ಕುರಿತು ನನ್ನ ಪತ್ರವನ್ನು ಎಚ್ಚರಿಕೆಯಿಂದ ಓದಿ ಎಂದು ಹೇಳಿದ್ದಾರೆ. ಅವರು ನನ್ನ ಸಲಹೆಗಳನ್ನು ಮುಂದೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಅವರ ಕಾಳಜಿ ಮತ್ತು ತ್ವರಿತ ಪ್ರತಿಕ್ರಿಯೆಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸಾಂಕ್ರಾಮಿಕ ರೋಗವನ್ನು ಸೋಲಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ” ಎಂದು ಹೆಚ್​.ಡಿ. ದೇವೇಗೌಡ ತಿಳಿಸಿದ್ದಾರೆ.ಭಾರತದಲ್ಲಿ ಕೊರೋನಾ ಸ್ಫೋಟ:ಭಾರತದಲ್ಲಿ ಭಾನುವಾರ 3,52,991 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 2,19,272 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,73,13,163ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಭಾನುವಾರ 2,812 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 1,95,123ಕ್ಕೆ ಏರಿಕೆ ಆಗಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 14,19,11,223 ಜನರಿಗೆ ಲಸಿಕೆ ಹಾಕಲಾಗಿದೆ.
ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.
ಈ ನಡುವೆ ಮೇ 01 ರಿಂದ ದೇಶದೆಲ್ಲೆಡೆ 18 ವರ್ಷಕ್ಕೆ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ, ಯಾರಿಗೂ ಉಚಿತ ಲಸಿಕೆ ನೀಡಲು ಕೇಂದ್ರ ಸರ್ಕಾರ ಮನಸ್ಸು ಮಾಡಿಲ್ಲ. ಈ ನಡುವೆ ಜನರ ಸಂಕಷ್ಟಗಳನ್ನು ಅರ್ಧ ಮಾಡಿಕೊಂಡಿರುವ ಕೆಲ ರಾಜ್ಯಗಳು ಉಚಿತ ಲಸಿಕೆ ನೀಡಲು ಮುಂದಾಗಿವೆ. ಕರ್ನಾಟಕ ಸೇರಿದಂತೆ ಸುಮಾರು 11 ರಾಜ್ಯಗಳು ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು