News Karnataka Kannada
Saturday, April 20 2024
Cricket
ವಿದೇಶ

ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ವಿಜಯೋತ್ಸವ ನಡೆಸಿದರೆ ಎಫ್ಐಆರ್ ದಾಖಲು

Photo Credit :

ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ವಿಜಯೋತ್ಸವ ನಡೆಸಿದರೆ ಎಫ್ಐಆರ್ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶವೂ ಪ್ರಕಟವಾಗುತ್ತಿದೆ. ಆದರೆ ಗೆದ್ದ ಪಕ್ಷಗಳ ಸಂಭ್ರಮಾಚರಣೆಗೆ ಕೊರೊನಾ ಸೋಂಕು ಬ್ರೇಕ್ ಹಾಕಿದೆ.

ಚುನಾವಣೆಯಲ್ಲಿ ಗೆದ್ದ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗುವುದು ಸರ್ವೇ ಸಾಮಾನ್ಯ. ಆದರೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಈಗಾಗಲೇ ಸೂಚನೆ ನೀಡಿದೆ. ಆದಾಗಿಯೂ, ಕ್ಯಾರೇ ಎನ್ನದ ಕೆಲ ರಾಜಕೀಯ ಪಕ್ಷಗಳು ಹಾಗೂ ಕಾರ್ಯಕರ್ತರು ಗೆಲುವಿನ ಬೆನ್ನಲ್ಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಕುಣಿದುಕುಪ್ಪಳಿಸಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಚುನಾವಣಾ ಆಯೋಗ, ಕೋವಿಡ್ ನಿಯಮ ಉಲ್ಲಂಘಿಸಿ ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದರೆ ಅಂತವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಖಡಕ್ ಸೂಚನೆ ನೀಡಿದೆ. ಅಲ್ಲದೇ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಇನ್ ಚಾರ್ಜ್ ಗಳನ್ನು ಅಮಾನತು ಮಾಡುವಂತೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು