News Karnataka Kannada
Thursday, April 25 2024
Cricket
ವಿದೇಶ

ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ

Photo Credit :

ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಸೋಂಕಿತರು ಸಜೀವ ದಹನವಾಗಿದ್ದಾರೆ.ವಾಸೈ ವಿರಾರ್ ಮುನ್ಸಿಪಲ್ ಕಾರ್ಪೊರೇಶನ್​ನ ಕರೋನಾ ನಿಯಂತ್ರಣ ಕೊಠಡಿಯಲ್ಲಿ ದುರ್ಘಟನೆ ಸಂಭವಿಸಿದೆ.
ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ನಂಬಲಾಗಿದೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸ್ನೇಹಿತರೊಬ್ಬರ ಕರೆ ಸ್ವೀಕರಿಸಿದೆ. ಅವರ ಅತ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ಕೇಳಿ ಅಲ್ಲಿಗೆ ಹೋಗುವಷ್ಟರಲ್ಲಿ ಆಸ್ಪತ್ರೆ ಹೊರಭಾಗದಲ್ಲಿ ಅಗ್ನಿಶಾಮಕ ವಾಹನಗಳು ನಿಂತಿದ್ದವು. ಕಟ್ಟಡದ ಎರಡನೇ ಮಹಡಿಯಲ್ಲಿರುವ ಐಸಿಯು ಕೇರ್​ ಹೊಗೆಯಿಂದ ಆವರಿಸಿತ್ತು. ಅಲ್ಲಿ ಇಬ್ಬರು ನರ್ಸ್​ಗಳು ಮಾತ್ರ ಇದ್ದರು. ವೈದ್ಯರನ್ನು ನೋಡಲು ಆಗಲಿಲ್ಲ. ಬೆಂಕಿಯನ್ನು ಹೋಗಿಸಲು ಅಗ್ನಿಶಾಮಕ ಸಿಬ್ಬಂದಿಗೆ ಸುಮಾರು ಅರ್ಧ ಗಂಟೆ ಬೇಕಾಯಿತು. ಬಳಿಕ ಅಲ್ಲಿಯೇ 8 ಮೃತದೇಹಗಳು ಪತ್ತೆಯಾಯಿತು ಎಂದು ಪ್ರತ್ಯಕ್ಷದರ್ಶಿ ಅವಿನಾಶ್​ ಪಾಟೀಲ್​ ಎಂಬುವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು