News Karnataka Kannada
Thursday, April 18 2024
Cricket
ವಿದೇಶ

ಕೋವಿಡ್‌: 70,589 ಹೊಸ ಪ್ರಕರಣ, 776 ಸಾವು

Photo Credit :

ಕೋವಿಡ್‌: 70,589 ಹೊಸ ಪ್ರಕರಣ, 776 ಸಾವು

ನವದೆಹಲಿ: ದೇಶದಾದ್ಯಂತ 24 ಗಂಟೆಗಳ ಅವಧಿಯಲ್ಲಿ 70,589 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 61 ಲಕ್ಷ ಗಡಿದಾಟಿದೆ.

ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ. ಅಂತೆಯೇ ಈವರೆಗೂ 51,01,398 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 9,47,576 ಸಕ್ರಿಯ ಪ್ರಕರಣಗಳು ಮಾತ್ರ ಇವೆ.

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 776 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್‌ಗೆ ಬಲಿಯಾದ ಸೋಂಕಿತರ ಸಂಖ್ಯೆ 96,318ಕ್ಕೆ ಏರಿಕಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 11,42,811 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಸೆ. 28ರವರೆಗೂ 7,31,10,041 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು