News Karnataka Kannada
Sunday, April 14 2024
Cricket
ವಿದೇಶ

ಗ್ರಾಮಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೋನ ಸೋಂಕಿಗೆ ಬಲಿಯಾದರೆ 50 ಲಕ್ಷ ಪರಿಹಾರ ಧನ ಘೋಷಿಸಿದ ಉತ್ತರ ಪ್ರದೇಶ ಸರ್ಕಾರ

Photo Credit :

ಗ್ರಾಮಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೊರೋನ ಸೋಂಕಿಗೆ ಬಲಿಯಾದರೆ 50 ಲಕ್ಷ ಪರಿಹಾರ ಧನ ಘೋಷಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ಕೊರೋನ ಸೋಂಕು ದೇಶಾದ್ಯಂತ ತನ್ನ ಯಮ ರೂಪವನ್ನು ತೋರಲಾರಂಭಿಸಿದೆ. ಅನೇಕ ಇಲಾಖೆಗಳು ತಮ್ಮ ಕೆಲಸವನ್ನು ದುಪ್ಪಟ್ಟು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಸಂಬಂಧ ಇಲಾಖೆಗಳಿಗೆ ಬಲ ತುಂಬುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿದೆ.

ಕೊರೋನಾದ ಈ ಸಮಯದಲ್ಲೂ ಗ್ರಾಮಾಭಿವೃದ್ಧಿ ಇಲಾಖೆ ಕೆಲಸ ನಿಲ್ಲಿಸಿಲ್ಲ. ಅದರ ಸಿಬ್ಬಂದಿ ಕೊರೋನ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ವಾರಿಯರ್ ಗಳ ರೀತಿ ಕೆಲಸ ಮಾಡುತ್ತಿರುವ ಗ್ರಾಮಾಭಿವೃದ್ಧಿ ಇಲಾಖೆಯ ಸಿಬ್ಬಂದಿಯಲ್ಲಿ ಯಾರಾದರೂ ಸೋಂಕಿನಿಂದಾಗಿ ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನವನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಇಲಾಖೆಯೊಂದಿಗೆ ಕೈ ಜೋಡಿಸಿಕೊಂಡು ದುಡಿಯುತ್ತಿರುವ ಸರ್ಕಾರಿ, ಅರೆ ಸರ್ಕಾರಿ, ಒಪ್ಪಂದಿತ, ದೈನಂದಿನ ಸಂಬಳ, ಹೊರಗುತ್ತಿಗೆ, ಸ್ವಾಯತ್ತ ಸಂಸ್ಥೆಗಳಿಗೂ ಈ ಪ್ರಕಟಣೆ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು