News Karnataka Kannada
Thursday, April 25 2024
ವಿದೇಶ

ಚಾಮರಾಜನಗರ ಆಕ್ಸಿಜನ್‌ ಕೊರತೆ ದುರಂತ ; ತಲಾ 2 ಲಕ್ಷ ರೂ ಪರಿಹಾರ ನೀಡಿದ ಸರ್ಕಾರ

Photo Credit :

ಚಾಮರಾಜನಗರ ಆಕ್ಸಿಜನ್‌ ಕೊರತೆ ದುರಂತ ; ತಲಾ 2 ಲಕ್ಷ ರೂ ಪರಿಹಾರ ನೀಡಿದ ಸರ್ಕಾರ

ಬೆಂಗಳೂರು: ಚಾಮರಾಜನಗರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಮೇ 2 ಮತ್ತು 3ರಂದು ಮೃತಪಟ್ಟಿರುವ 24 ಮಂದಿಯ ಕುಟುಂಬಗಳಿಗೆ ತಲಾ ₹ 2 ಲಕ್ಷದಂತೆ ಒಟ್ಟು ₹ 48 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಶುಕ್ರವಾರ ಬಿಡುಗಡೆ ಮಾಡಲಾಗಿದೆ.ಈ ಪ್ರಕರಣದಲ್ಲಿ ಹೈಕೋರ್ಟ್‌ಗೆ ನೀಡಿದ್ದ ಭರವಸೆಯಂತೆ ಪರಿಹಾರದ ಮೊತ್ತವನ್ನು ಕಂದಾಯ ಇಲಾಖೆ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿದೆ. 24 ಮಂದಿ ಮೃತರ ಸಂಪೂರ್ಣ ವಿವರಗಳನ್ನು ಚಾಮರಾಜನಗರ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪಡೆದು, ಕಾನೂನುಬದ್ಧ ವಾರಸುದಾರರನ್ನು ಖಚಿತಪಡಿಸಿಕೊಂಡು ಪರಿಹಾರ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೃತಪಟ್ಟ ಎಲ್ಲ ವ್ಯಕ್ತಿಗಳ ಅಧಿಕೃತ ವಾರಸುದಾರರಿಗೆ ಪರಿಹಾರ ಪಾವತಿಸಿರುವ ಕುರಿತು ಹೈಕೋರ್ಟ್‌ಗೆ ಅನುಸರಣಾ ವರದಿ ಸಲ್ಲಿಸಲು ಪೂರಕವಾಗಿ ವಿವರವಾದ ಮಾಹಿತಿಯುಳ್ಳ ವರದಿಯನ್ನು ಅಡ್ವೊಕೇಟ್‌ ಜನರಲ್‌ ಕಚೇರಿಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ.
ಮೇ 2 ಮತ್ತು 3ರಂದು ಚಾಮರಾಜನಗರ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದರು. ಆಮ್ಲಜನಕದ ಕೊರತೆ ಇದಕ್ಕೆ ಕಾರಣ ಎಂಬ ಆರೋಪವಿದೆ. ಈ ಕುರಿತು ಹೈಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಮೃತರ ಕುಟುಂಬಗಳಿಗೆ ತಲಾ ₹ 2 ಲಕ್ಷ ತುರ್ತು ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಮೇ 20ರಂದು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು