News Karnataka Kannada
Friday, April 12 2024
Cricket
ವಿದೇಶ

ಜಪಾನ್ ಪ್ರಧಾನಿ ಶಿಂಜೊ ಅಬೆ ರಾಜೀನಾಮೆಗೆ ನಿರ್ಧಾರ

Photo Credit :

ಜಪಾನ್ ಪ್ರಧಾನಿ ಶಿಂಜೊ ಅಬೆ ರಾಜೀನಾಮೆಗೆ ನಿರ್ಧಾರ

ನವದೆಹಲಿ: ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಜಪಾನ್ ನ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಗಳು ಹೇಳಿವೆ.

ಜಪಾನ್ ನಲ್ಲಿ ಅತೀ ದೀರ್ಘಕಾಲ ಪ್ರಧಾನಿಯಾಗಿದ್ದ ಅಬೆ ಅವರು ಜಪಾನ್ ನ್ನು ವಿಶ್ವದ ಮೂರನೇ ಬಲಿಷ್ಠ ಆರ್ಥಿಕ ರಾಷ್ಟ್ರವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಜನರಿಗೆ ಒಳ್ಳೆಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥನಾದರೆ ನಾನು ಪ್ರಧಾನಿಯಾಗಿರಲ್ಲ. ನಾನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು 65ರ ಹರೆಯದ ಅಬೆ ಅವರು ಹೇಳಿರುವರು.

ಅಲ್ಸರೇಟಿವ್ ಕೊಲೈಟಿಸ್ ಕಾಯಿಲೆಯಿಂದ ಬಳಲುತ್ತಿರುವ ಅಬೆ ಅವರು ವಾರದಲ್ಲಿ ಎರಡು ಸಲ ಆಸ್ಪತ್ರೆಗೆ ಭೇಟಿ ನೀಡಿದ್ದರು. 2021ರ ಸಪ್ಟೆಂಬರ್ ನಲ್ಲಿ ಅವರ ಅಧಿಕಾರ ಅವಧಿಯು ಮುಕ್ತಾಯವಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು