News Karnataka Kannada
Sunday, April 21 2024
Cricket
ವಿದೇಶ

ಟಿಎಂಸಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ: ಜಗದೀಫ್ ಧಂಕರ್

Photo Credit :

ಟಿಎಂಸಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ: ಜಗದೀಫ್ ಧಂಕರ್

ಕೋಲ್ಕತ್ತ: ರಾಜಭವನದಲ್ಲಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ರಾಜ್ಯಪಾಲರ ಸಂಬಂಧಿಕರನ್ನು ನೇಮಿಸಿಕೊಳ್ಳಲಾಗಿದೆ ಎಂದು ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಮಾಡಿರುವ ಆರೋಪವನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅಲ್ಲಗಳೆದಿದ್ದಾರೆ.

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ. ಇದರಿಂದ ಗಮನ ಬೇರೆಡೆ ಸೆಳೆಯಲು ತಮ್ಮ ವಿರುದ್ಧ ಆರೋಪ ಮಾಡಲಾಗಿದೆ ಎಂದು ಧನಖರ್ ಹೇಳಿದ್ದಾರೆ.

ವಿಶೇಷ ಕರ್ತವ್ಯದಲ್ಲಿರುವ 6 ಮಂದಿ ಅಧಿಕಾರಿಗಳು ನನ್ನ ಕುಟುಂಬದ ಆಪ್ತರಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ

ರಾಜಭವನದಲ್ಲಿರುವ 6 ಮಂದಿ ವಿಶೇಷ ಕರ್ತವ್ಯ ಅಧಿಕಾರಿಗಳು ನನ್ನ ಸಂಬಂಧಿಕರೆಂದು ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಟ್ವೀಟ್ ಮೂಲಕ ಮಾಡಿರುವ ಆರೋಪ ನಿಜವಲ್ಲ.

ವಿಶೇಷ ಕರ್ತವ್ಯ ಅಧಿಕಾರಿಗಳು ಮೂರು ರಾಜ್ಯಗಳವರಾಗಿದ್ದು, ನಾಲ್ಕು ಭಿನ್ನ ಸಮುದಾಯಗಳಿಗೆ ಸೇರಿದವರು. ಅವರು ಯಾರೂ ನನ್ನ ಕುಟುಂಬದ ಆಪ್ತರಲ್ಲ. ಆ ಪೈಕಿ ನಾಲ್ವರಂತೂ ನನ್ನ ಸಮುದಾಯ, ರಾಜ್ಯದವರೂ ಅಲ್ಲ’ ಎಂದು ಧನಖರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಕಾನೂನು-ಸುವ್ಯವಸ್ಥೆಗೆ ಸಂಬಂಧಿಸಿ ರಾಜ್ಯಪಾಲರು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಭಾನುವಾರ ತರಾಟೆಗೆ ತೆಗೆದುಕೊಂಡಿದ್ದರು. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತ ಇರುವ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಳಿಕ ನಡೆಯುತ್ತಿರುವ ತಡೆಯಿಲ್ಲದ ಹಿಂಸಾಚಾರವು ಮನುಷ್ಯತ್ವವನ್ನು ನಾಚಿಸುವಂತಿದೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರನ್ನು ನಿಯಂತ್ರಿಸಲು ರಾಜ್ಯ ಪೊಲೀಸ್‌ ವ್ಯವಸ್ಥೆಗೆ ಸಾಧ್ಯವಾಗಿಲ್ಲ. ಗಲಭೆ ಕೃತ್ಯದಲ್ಲಿ ಭಾಗಿಯಾದವರನ್ನು ಶಿಕ್ಷಿಸಬೇಕು ಮತ್ತು ಶಿಸ್ತು ಮೂಡಿಸಬೇಕು ಎಂದು ರಾಜ್ಯಪಾಲರು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು