News Karnataka Kannada
Monday, April 22 2024
Cricket
ವಿದೇಶ

ತಮಿಳಿನ ಖ್ಯಾತ ಬರಹಗಾರ ಕೆ ರಾಜನಾರಾಯಣ್ ನಿಧನ

Photo Credit :

ತಮಿಳಿನ ಖ್ಯಾತ ಬರಹಗಾರ ಕೆ ರಾಜನಾರಾಯಣ್ ನಿಧನ

ಪುದುಚೇರಿ: ತಮಿಳಿನ ಖ್ಯಾತ ಬರಹಗಾರ, ಕಾದಂಬರಿಕಾರ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ. ರಾಜನಾರಾಯಣ್‌ ಅವರು(98) ಸೋಮವಾರ ರಾತ್ರಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜನಪ್ರಿಯತೆ ಪಡೆದ ಕೆ.ರಾಜನಾರಾಯಣ್‌ ಅವರು ವಯೋಸಹಜ ಕಾಯಿಲೆಯಿಂದಾಗಿ ಸೋಮವಾರ ರಾತ್ರಿ ಸರ್ಕಾರಿ ನಿವಾಸದಲ್ಲಿ ಕೊನೆ ಉಸಿರೆಳೆದರು.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರು ಮಂಗಳವಾರ ಕಿ ರಾ ಅವರ ನಿವಾಸಕ್ಕೆ ಭೇಟಿ ನೀಡಿ, ಅಂತಿಮ ನಮನ ಸಲ್ಲಿಸಿದ್ದು, ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ರಾಜನಾರಾಯಣ್‌ ಅವರ ಮನೆಯನ್ನು ಸ್ಮಾರಕ ಗ್ರಂಥಾಲಯವನ್ನಾಗಿ ಪರಿವರ್ತಿಸುವಂತೆ ಅನೇಕ ತಮಿಳು ಬರಹಗಾರರು ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದು ಅವರು ತಿಳಿಸಿದರು.

ಕೆ.ರಾಜನಾರಾಯಣ್‌ ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿರುವ ಪುದುಚೇರಿ ಮುಖ್ಯಮಂತ್ರಿ ಎನ್‌. ರಂಗಸ್ವಾಮಿ ಅವರು,’ ಸಾಹಿತ್ಯ ಲೋಕವು ಒಬ್ಬ ಪ್ರಸಿದ್ಧ ಚಿಂತಕ, ಬರಹಗಾರರನ್ನು ಕಳೆದುಕೊಂಡಿದೆ’ ಎಂದಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ಕೂಡ ಸಂತಾಪ ಸೂಚಿಸಿದ್ದಾರೆ.

1980ರ ದಶಕದಲ್ಲಿ ಪುದುಚೇರಿ ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ರಾಜನಾರಾಯಣ್‌ ಅವರು ಸೇವೆ ಸಲ್ಲಿಸಿದ್ದರು.ಅವರು ಸಣ್ಣ ಕಥೆಗಳು, ಕಾದಂಬರಿಗಳು, ಜಾನಪದ ಮತ್ತು ಪ್ರಬಂಧಗಳಿಗೆ ಪ್ರಖ್ಯಾತಿ ಪಡೆದಿದ್ದರು. 1991ರಲ್ಲಿ ‘ಗೋಪಲ್ಲಪುರತು ಮಕ್ಕಳ್‌’ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು.

ತಮಿಳುನಾಡಿನ ದಕ್ಷಿಣ ಭಾಗದ ಒಣ ಮತ್ತು ಬಿರುಬಿಸಿಲಿನ ಪ್ರದೇಶ ‘ಕರಿಸಾಲ್‌ ಭೂಮಿ’ಯ ಜನರು ಮತ್ತು ಅಲ್ಲಿನ ಸಂಸ್ಕೃತಿ ಬಗ್ಗೆ ಕೆ.ರಾಜನಾರಾಯಣ್‌ ಅವರು ಬಿಂಬಿಸಿದ ಚಿತ್ರಣವು ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು