News Karnataka Kannada
Saturday, April 20 2024
Cricket
ವಿದೇಶ

ತಮಿಳುನಾಡು ಚುನಾವಣೆಯಲ್ಲಿ ಸೋತ ಕೆ. ಅಣ್ಣಾಮಲೈ ಟ್ವೀಟ್

Photo Credit :

ತಮಿಳುನಾಡು ಚುನಾವಣೆಯಲ್ಲಿ ಸೋತ ಕೆ. ಅಣ್ಣಾಮಲೈ ಟ್ವೀಟ್

ಚೆನ್ನೈ, ; ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 234 ಕ್ಷೇತ್ರಗಳ ಪೈಕಿ ಡಿಎಂಕೆ ಮೈತ್ರಿಕೂಟ 159 ಸ್ಥಾನಗಳಲ್ಲಿ ಜಯಗಳಿಸಿದೆ. ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಫಲಿತಾಂಶ ನಿರಾಸೆ ಮೂಡಿಸಿದೆ.ವಿಧಾನಸಭೆ ಚುನಾವಣೆ ಘೋಷಣೆಗೂ ಮೊದಲು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿ ಸೇರಿದ್ದರು. ಪಕ್ಷ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ಮಾಡಿತ್ತು.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಕ ಅಣ್ಣಾಮಲೈಗೆ ಅರವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ರಾಜ್ಯದ ಬಿಜೆಪಿ ಉಸ್ತುವಾರಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸಿದ್ದರು.ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಅಣ್ಣಾಮಲೈ 60 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಆಡಳಿತಾರೂಢ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಆಡಳಿತ ಪಕ್ಷವ 74 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ.
ಚುನಾವಣೆ ಫಲಿತಾಂಶದ ಬಳಿಕ ಟ್ವೀಟ್ ಮಾಡಿರುವ ಅಣ್ಣಾಮಲೈ, “ಸೋಲು ಜೀವನದ ಭಾಗ. ಇಂತಹ ಹಲವನ್ನು ನೋಡಿದ್ದೇನೆ. ಇಂದು ಸಹ ಅಂತಹದ್ದೇ ಒಂದು ದಿನ. ಗೆಲುವಿನ ರೇಖೆಯನ್ನು ದಾಟಲು ಆಗಿಲ್ಲ” ಎಂದು ಹೇಳಿದ್ದಾರೆ.”ಅರವಕುರುಚಿ ಕ್ಷೇತ್ರದಲ್ಲಿ 68,000 ಮತಗಳನ್ನು ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಜೊತೆಗೆ ಎಂದಿಗೂ ಇರುತ್ತೇನೆ” ಎಂದು ಟ್ವೀಟ್‌ನಲ್ಲಿ ಅಣ್ಣಾಮಲೈ ತಿಳಿಸಿದ್ದಾರೆ. ತಮಿಳುನಾಡಿನ ರಾಜಕೀಯ ವ್ಯವಸ್ಥೆಯನ್ನೇ ಬದಲಾವಣೆ ಮಾಡುವ ನಿರೀಕ್ಷೆ ಹೊತ್ತು ಅಣ್ಣಾಮಲೈ ಚುನಾವಣಾ ಕಣಕ್ಕಿಳಿದಿದ್ದರು. ಆದರೆ, ಮೊದಲ ಪ್ರಯತ್ನದಲ್ಲಿ ಸೋಲಾಗಿದೆ. ಖಡಕ್ ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿದ ಅಣ್ಣಾಮಲೈಗೆ ಜನರು ಬೆಂಬಲ ನೀಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು