News Karnataka Kannada
Tuesday, April 23 2024
Cricket
ವಿದೇಶ

ತಾಯಿಗಾಗಿ ಆಮ್ಲಜನಕ ಕೇಳಿದ ಮಗನ ಕಪಾಳಕ್ಕೆ ಹೊಡೆಯುತ್ತೇನೆ ಎಂದ ಸಚಿವರು

Photo Credit :

ತಾಯಿಗಾಗಿ ಆಮ್ಲಜನಕ ಕೇಳಿದ ಮಗನ ಕಪಾಳಕ್ಕೆ ಹೊಡೆಯುತ್ತೇನೆ ಎಂದ ಸಚಿವರು

ನವದೆಹಲಿ, : ಕೊರೊನಾ ಪೀಡಿತ ಮಹಿಳೆಯ ಮಗನಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ಹೇಳುವ ಮೂಲಕ ಕೇಂದ್ರ ಸಚಿವರು ಮಾನವೀಯತೆ ಮರೆತು ವರ್ತಿಸಿರುವ ಘಟನೆ ನಡೆದಿದೆ.
ಕೊರೊನಾ ಸೋಂಕು ಪೀಡಿತ ತಾಯಿಗೆ ಆಕ್ಸಿಜನ್ ಒದಗಿಸುವಂತೆ ಬೇಡಿಕೊಂಡ ವ್ಯಕ್ತಿಯೊಬ್ಬರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ಕಪಾಳಕ್ಕೆ ಹೊಡೆಯುತ್ತೇನೆ ಎಂದು ಹೇಳಿದ್ದು ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎರಡು ದಿನಗಳ ಹಿಂದೆ ದಾಮೋಹ್ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಗಳನ್ನು ಲೂಟಿ ಮಾಡಲಾಗಿತ್ತು. ಘಟನೆ ನಡೆದ ಎರಡು ದಿನಗಳ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಈ ವೇಳೆ ವ್ಯಕ್ತಿಯೊಬ್ಬರು ಸಚಿವರ ಬಳಿ ಬಂದು ನನ್ನ ತಾಯಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಆಕ್ಸಿಜನ್ ಸಿಲಿಂಡರ್ ಅಗತ್ಯವಿದೆ. 36 ಗಂಟೆಗಳ ಬಳಿಕ ಆಕ್ಸಿಜನ್ ನೀಡುವುದಾಗಿ ಆಸ್ಪತ್ರೆಯವರು ಹೇಳಿದ್ದರು.ಆದರೆ, ಇನ್ನೂ ಕೊಟ್ಟಿಲ್ಲ ಎಂದು ಹೇಳಿದರು. ಮಾತನಾಡುವ ವೇಳೆ ವ್ಯಕ್ತಿ ಸಚಿವರ ಮೇಲೆ ಬೆರಳು ತೋರಿಸಿ ಮಾತನಾಡಿದ್ದರು. ಘಟನೆ ಕುರಿತು ಕಾಂಗ್ರೆಸ್ ಕೇಂದ್ರ ಸಚಿವರ ವಿರುದ್ಧ ಹರಿಹಾಯುತ್ತಿದ್ದು, ಕೇಂದ್ರ ಸಚಿವರ ಮಾತ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡ ಸಚಿವರು ಕೈಕೆಳಗಿಳಿಸುವಂತೆ ಸೂಚಿಸಿದರು. ಅಲ್ಲದೆ, ಇದೇ ಧಾಟಿಯಲ್ಲಿ ಮಾತನಾಡಿದರೆ, ಕಪಾಳಕ್ಕೆ ಹೊಡೆಯುತ್ತೇನೆಂದು ಹೇಳಿದರು.ನಿಮಗೆ ಯಾರಾದರೂ ಆಮ್ಲಜನಕ ಸಿಲಿಂಡರ್ ನಿರಾಕರಿಸಿದ್ದಾರೆಯೇ? ಎಂದು ಕೇಳಿದ್ದಾರೆ. ಆಗ ಆ ವ್ಯಕ್ತಿ, ಹೌದು, ಅವರು ನಿರಾಕರಿಸಿದರು, ನಮಗೆ ಐದು ನಿಮಿಷ ಮಾತ್ರ ಆಕ್ಸಿಜನ್ ಸಿಕ್ಕಿತು ಎಂದು ಉತ್ತರಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ನಂತರ ಅಳಲಾರಂಭಿಸಿದ ವ್ಯಕ್ತಿ, ಹೌದು, ನನಗೆ ಅದುವೇ ಸಿಗುತ್ತದೆ ಎಂಬುದು ಗೊತ್ತಿದೆ. ನನ್ನ ತಾಯಿ ಅಲ್ಲಿಯೇ ಮಲಗಿದ್ದಾಳೆ. ಈಗ ನಾವೇನೂ ಮಾಡಬೇಕು ಎಂದು ಕೇಳಿದ್ದಾನೆ. ಬಳಿಕ ವಿಡಿಯೋ ರೆಕಾರ್ಡ್ ಆಗುತ್ತಿರುವುದನ್ನು ಗಮನಿಸಿದ ಸಚಿವರು ಕೂಡಲೇ ಎಚ್ಚೆತ್ತುಕೊಂಡು ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು