News Karnataka Kannada
Wednesday, April 24 2024
Cricket
ವಿದೇಶ

ದಾಖಲೆಯ ಕೊರೊನಾ ಪ್ರಕರಣ: ಒಂದೇ ದಿನ 97 ಸಾವಿರ ಮಂದಿಗೆ ಸೋಂಕು

Photo Credit :

ದಾಖಲೆಯ ಕೊರೊನಾ ಪ್ರಕರಣ: ಒಂದೇ ದಿನ 97 ಸಾವಿರ ಮಂದಿಗೆ ಸೋಂಕು

ನವದೆಹಲಿ: ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ.

ಒಂದೇ ದಿನ ಕೋವಿಡ್‌ಗೆ 1,201 ಮಂದಿ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 77,472ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು 46,59,985 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟಾರೆ 36,24,197 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 9,58,316 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು