News Karnataka Kannada
Friday, April 12 2024
Cricket
ವಿದೇಶ

ದೆಹಲಿಯಲ್ಲಿ ಮೇ 3ರವರೆಗೂ ಲಾಕ್‌ಡೌನ್ ವಿಸ್ತರಿಸಿದ ಸರ್ಕಾರ

Photo Credit :

ದೆಹಲಿಯಲ್ಲಿ ಮೇ 3ರವರೆಗೂ ಲಾಕ್‌ಡೌನ್ ವಿಸ್ತರಿಸಿದ ಸರ್ಕಾರ

ನವದೆಹಲಿ, ; ಕೊರೊನಾವೈರಸ್ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ ಒಂದು ವಾರಗಳವರೆಗೂ ಲಾಕ್‌ಡೌನ್ ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿ ಕೊವಿಡ್-19 ಸೋಂಕಿನ ಹರಡುವಿಕೆ ಪ್ರಮಾಣಯಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇ 3ರ ಸೋಮವಾರ ಸಂಜೆ 5 ಗಂಟೆವರೆಗೂ ಲಾಕ್‌ಡೌನ್ ವಿಸ್ತರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಾಂಕ್ರಾಮಿಕ ಪಿಡುಗು ಆರಂಭವಾದ ದಿನದಿಂದ ಈವರೆಗೂ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಗುರುವಾರ ಪಾಸಿಟಿವಿಟಿ ದರ ಶೇ.36ರಷ್ಟು ದಾಖಲಾಗಿದೆ. ದೆಹಲಿಯ ಕೆಲವು ಪ್ರದೇಶಗಳಲ್ಲಿ ಆಕ್ಸಿಜನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇನ್ನು ಕೆಲವು ಪ್ರದೇಶಗಳಲ್ಲಿ ಆಮ್ಲಜನಕವನ್ನು ಸರಬರಾಜು ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 24103 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 357 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 13898ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 22,695 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 8,97,804ಕ್ಕೆ ಏರಿಕೆಯಾಗಿದೆ. ಇತರ ಹೊರತಾಗಿ ದೆಹಲಿಯಲ್ಲಿ 93080 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು