News Karnataka Kannada
Thursday, April 25 2024
ವಿದೇಶ

ದೆಹಲಿ ಆಸ್ಪತ್ರೆಗಳಲ್ಲಿ ನರ್ಸ್ ಗಳು ಕಡ್ಡಾಯವಾಗಿ ಹಿಂದಿ ಅಥವಾ ಇಂಗ್ಲಷ್ ಭಾಷೆಯನ್ನೇ ಬಳಸಬೇಕು

Photo Credit :

ದೆಹಲಿ ಆಸ್ಪತ್ರೆಗಳಲ್ಲಿ ನರ್ಸ್ ಗಳು ಕಡ್ಡಾಯವಾಗಿ ಹಿಂದಿ ಅಥವಾ ಇಂಗ್ಲಷ್ ಭಾಷೆಯನ್ನೇ ಬಳಸಬೇಕು

ನವದೆಹಲಿ: ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲಿ ಅದರಲ್ಲಿಯೂ ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೇರಳದ ಯುವತಿಯರೇ ನರ್ಸ್‌ಗಳಾಗಿ ನೇಮಕಗೊಳ್ಳುತ್ತಾರೆ. ಈ ಕಾರಣದಿಂದಾಗಿ ಅವರು ಮಾತನಾಡುವ ಭಾಷೆ ರೋಗಿಗಳಿಗೆ ಅರ್ಥವಾಗುತ್ತಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.  

 

ಇದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಸರ್ಕಾರ, ಕರ್ತವ್ಯ ನಿರ್ವಹಿಸುವ ನರ್ಸ್‌ಗಳು ಆಸ್ಪತ್ರೆಯಲ್ಲಿ ಮಲಯಾಳಂ ಭಾಷೆಯನ್ನು ಮಾತನಾಡದಂತೆ ನಿಷೇಧ ಹೇರಿದೆ.ಹಿಂದಿ ಅಥವಾ ಇಂಗ್ಲೀಷ್ ಭಾಷೆಯಲ್ಲಿ ವ್ಯವಹರಿಸದಿರುವುದು ತಿಳಿದು ಬಂದರೆ ಅಂಥ ನರ್ಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೀಡಿದ್ದಾರೆ.

 

ದೆಹಲಿಯ ಗೋವಿಂದ್ ವಲ್ಲಭ್‌ ಪಂಥ್‌ ಇನ್‌ಸ್ಟಿಟ್ಯೂಟ್‌ ಆಫ್‌ ಪೋಸ್ಟ್ ಗ್ರ್ಯಾಜುಯೇಶನ್ ಮೆಡಿಕಲ್ ಎಜುಕೇಶನ್ ಆಯಂಡ್‌ ರಿಸರ್ಚ್ (GIPMER) ಈ ವಿಷಯವನ್ನು ಬಹಿರಂಗಪಡಿಸಿರುವುದಾಗಿ ವರದಿಯಾಗಿದೆ.

 

‘ಕರ್ತವ್ಯದ ವೇಳೆ ಮಲಯಾಳಿ ಭಾಷೆ ಮಾತನಾಡುವ ವಿಚಾರವಾಗಿ ದೂರುಗಳು ಬಂದಿದೆ. ಇಲ್ಲಿನ ಬಹುತೇಕ ರೋಗಿಗಳು ಹಾಗೂ ಸಿಬ್ಬಂದಿಗೆ ಈ ಭಾಷೆ ಬರದುದರಿಂದ ಅಸಹಾಯಕತೆ ಉಂಟಾಗುತ್ತಿದ್ದು ಕಷ್ಟವಾಗುತ್ತಿದೆ. ಆದ್ದರಿಂದ ಎಲ್ಲಾ ನರ್ಸಿಂಗ್ ಸಿಬ್ಬಂದಿಗೆ ಹಿಂದಿ ಅಥವಾ ಇಂಗ್ಲೀಷ್ ಭಾಷೆಯನ್ನು ಮಾತ್ರವೇ ಬಳಸಬೇಕೆಂದು ಸೂಚಿಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು