News Karnataka Kannada
Wednesday, April 24 2024
Cricket
ವಿದೇಶ

ದೇಶದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ: ಆರೋಗ್ಯ ಸಚಿವ ಹರ್ಷವರ್ಧನ್

Photo Credit :

ದೇಶದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ: ಆರೋಗ್ಯ ಸಚಿವ ಹರ್ಷವರ್ಧನ್

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣದಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಲೋಕಸಭೆಗೆ ತಿಳಿಸಿದ್ದಾರೆ.

ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಅವರು, ಗರಿಷ್ಠ ಪ್ರಕರಣಗಳು ಮತ್ತು ಸಾವುಗಳು ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಬಿಹಾರ, ತೆಲಂಗಾಣ, ಒಡಿಶಾ, ಅಸ್ಸಾಂ, ಕೇರಳ ಮತ್ತು ಗುಜರಾತ್‌ಗಳಲ್ಲಿ ವರದಿಯಾಗಿವೆ. ಈ ಎಲ್ಲ ರಾಜ್ಯಗಳಲ್ಲಿಯೂ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

ಕೋವಿಡ್ 19 ನಿರ್ವಹಣೆಯ ಪ್ರಯತ್ನದಲ್ಲಿ ಭಾರತವು ಪ್ರತಿ ಮಿಲಿಯನ್ ಕೊರೊನಾ ವೈರಸ್‌ ಪ್ರಕರಣಗಳಿಗೆ 3,328 ಮರಣಗಳು ಹಾಗೂ ಪ್ರತಿ ಒಂದು ಮಿಲಿಯನ್ ಜನಸಂಖ್ಯೆಗೆ 55 ಸಾವುಗಳಿಗೆ ನಿಯಂತ್ರಿಸುವಲ್ಲಿ ಸಫಲವಾಗಿದೆ. ಇದೇ ರೀತಿ ಕೊರೊನಾ ವೈರಸ್‌ಗೆ ತುತ್ತಾದ ಜಗತ್ತಿನ ದೇಶಗಳಿಗೆ ಹೋಲಿಸಿದರೆ ನಮ್ಮದು ಕಡಿಮೆ ಮರಣ ಪ್ರಮಾಣ ಇರುವ ದೇಶಗಳಲ್ಲಿ ಒಂದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು