News Karnataka Kannada
Wednesday, April 24 2024
Cricket
ವಿದೇಶ

ದೇಶದಲ್ಲಿ 2 ಕೋಟಿಯ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Photo Credit :

ದೇಶದಲ್ಲಿ 2 ಕೋಟಿಯ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾ ಪಿಡುಗು ಕೊರೊನಾದ ಕೆಟ್ಟ ದಾಖಲೆಗಳಿಗೆ ಭಾರತ ವೇದಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಕೋಟಿಯ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 3,57,229 ಜನಕ್ಕೆ ಸೋಂಕು ತಗುಲಿದ್ದು, 3,449 ಸೋಂಕಿತರನ್ನ ಮಾಹಾಮಾರಿ ಬಲಿ ಪಡೆದುಕೊಂಡಿದೆ.ನಿನ್ನೆ ಒಟ್ಟು 3,20,289 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 34,47,133 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,02,82,833ಕ್ಕೇರಿಕೆಯಾಗಿದೆ. ಇದುವರೆಗೂ ಕೊರೊನಾಗೆ 2,22,408 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ದೇಶದ ರಾಜಧಾನಿ ದೆಹಲಿಯಲ್ಲಿ ಕೊರೊನಾ ಆತಂಕ ಹೆಚ್ಚಾಗುತ್ತಿದ್ರೆ, ಮಹಾಮಾರಿಯಲ್ಲಿ ನಿಧಾನಗತಿಯಲ್ಲಿ ಸೋಂಕು ಹರಡುವಿಕೆ ಪ್ರಮಾಣ ಇಳಿಕೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ದಾಖಲಾಗುತ್ತಿದೆ. ಇದರ ಜೊತೆಗೆ ಸಾವಿನ ಪ್ರಮಾಣವೂ ಕೊಂಚ ತಗ್ಗುತ್ತಿದೆ.
ಈ ನಡುವೆ ಹಲವು ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭಗೊಂಡಿದೆ. ದೆಹಲಿಯ 77 ಶಾಲೆಗಳನ್ನ ಲಸಿಕಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಮಧ್ಯಪ್ರದೇಶದಲ್ಲಿ ಮೇ 5ರಿಂದ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಬಹುತೇಕ ರಾಜ್ಯ ಸರ್ಕಾರಗಳು 18 ರಿಂದ 44 ವರ್ಷದೊಳಗಿನ ಎಲ್ಲರಿಗೂ ಉಚಿತ ಲಸಿಕೆ ನೀಡಲು ಮುಂದಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು