News Karnataka Kannada
Wednesday, April 24 2024
Cricket
ವಿದೇಶ

ನಿವೃತ್ತಿ ನಂತರ ಸೂಕ್ಷ್ಮ ವಿಚಾರಗಳ ಹಂಚಿಕೆಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

Photo Credit :

ನಿವೃತ್ತಿ ನಂತರ ಸೂಕ್ಷ್ಮ ವಿಚಾರಗಳ ಹಂಚಿಕೆಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ: ಗುಪ್ತಚರ ಮತ್ತು ಭದ್ರತೆಗೆ ಸಂಬಂಧಿಸಿದ ಇಲಾಖೆಗಳಲ್ಲಿ/ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ‘ಸೂಕ್ಷ್ಮ ಮಾಹಿತಿ’ಗಳನ್ನು ಪ್ರಕಟಿಸದಂತೆ ತಡೆಯುವ ಮೂಲಕ ಕೇಂದ್ರ ಸರ್ಕಾರ ಈ ಹಿಂದಿನ ತನ್ನ ನಿಯಮಗಳಿಗೆ ತಿದ್ದುಪಡಿ ತಂದಿದೆ.

ಹೊಸ ನಿಯಮಾವಳಿಗಳಲ್ಲಿ, ಆ ಸಂಸ್ಥೆಯಲ್ಲಿ ಕೆಲಸ ಮಾಡುವಂತಹ ಸಿಬ್ಬಂದಿ ಸಂಸ್ಥೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ ಎಂಬ ಷರತ್ತುಗಳನ್ನು ಸೇರಿಸಲಾಗಿದೆ. ಒಂದು ವೇಳೆ ಇಂಥ ಮಾಹಿತಿಗಳನ್ನು ಪ್ರಕಟಿಸಬೇಕೆನಿಸಿದರೆ, ಸಂಸ್ಥೆಯ ಮುಖ್ಯಸ್ಥರಿಂದ ಪೂರ್ವಾನುಮತಿ ಪಡೆಯಬೇಕು ಎಂದು ಷರತ್ತುಗಳಲ್ಲಿ ಸೇರಿಸಲಾಗಿದೆ. 2007ರಿಂದ ಜಾರಿಯಲ್ಲಿದ್ದ ಈ ಹಿಂದಿನ ನಿಯಮದಂತೆ ಸಂಸ್ಥೆಯ ಮುಖ್ಯಸ್ಥರ ಬದಲಿಗೆ ವಿಭಾಗದ ಮುಖ್ಯಸ್ಥರಿಂದ ಅನುಮತಿ ಪಡೆದರೆ ಸಾಕಾಗಿತ್ತು.

ಮೇ 31ರಂದು ಪ್ರಕಟವಾದ ‌’ಕೇಂದ್ರ ನಾಗರಿಕ ಸೇವೆಗಳ (ಪಿಂಚಣಿ) ತಿದ್ದುಪಡಿ ನಿಯಮಗಳು, 2021′ ಅನ್ನು ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.

ಹೊಸ ನಿಯಮಗಳ ಪ್ರಕಾರ, ಸಂಸ್ಥೆಯ ಮುಖ್ಯಸ್ಥರಿಗೆ ಎಲ್ಲ ರೀತಿಯ ಜವಾಬ್ದಾರಿಯನ್ನು ನೀಡಲಾಗಿದೆ. ಯಾವುದೇ ಮಾಹಿತಿಯನ್ನು ಸಂಸ್ಥೆಯ ಮುಖ್ಯಸ್ಥರ ಅನುಮತಿಯಿಲ್ಲದೇ ಪ್ರಕಟಿಸಿದರೆ, ಅಂಥವರ ಪಿಂಚಣಿಯನ್ನು ತಡೆ ಹಿಡಿಯುವ ಅಥವಾ ಹಿಂತೆಗೆದುಕೊಳ್ಳುವ ಅಧಿಕಾರ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು