News Karnataka Kannada
Thursday, April 18 2024
Cricket
ವಿದೇಶ

ನೂತನ ಐಟಿ ನಿಯಮ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೊರೆ ಹೋದ ವಾಟ್ಸಾಪ್

Photo Credit :

ನೂತನ ಐಟಿ ನಿಯಮ   ಪ್ರಶ್ನಿಸಿ  ದೆಹಲಿ  ಹೈಕೋರ್ಟ್ ಮೊರೆ ಹೋದ ವಾಟ್ಸಾಪ್

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆ್ಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ.
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ.
“ಮಾಹಿತಿಯ ಪ್ರಾಥಮಿಕ ಮೂಲವನ್ನು ಗುರುತಿಸಲು” ಕೆಲವೊಂದು ನಿಬಂಧನೆಗಳನ್ನು ಮಾಡಬೇಕಾಗಿದೆ, ಈ ಅಂಶವನ್ನು ಪ್ರಶ್ನಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.ಭಾರತದಲ್ಲಿ ಸುಮಾರು 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ ಎಂದು ರಾಯಿಟರ್ಸ್ ಕೂಡ ವರದಿ ಮಾಡಿದ್ದು, ಆದರೆ ದೃಢೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್‌ಆ್ಯಪ್‌, ಫೇಸ್‌ ಬುಕ್‌, ಟ್ವಿಟರ್‌ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್‌ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.
ಇದೇ ವೇಳೆ, ಅಮೆಜಾನ್‌ ಪ್ರೈಮ್‌, ನೆಟ್‌ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್‌ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್‌ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು