News Karnataka Kannada
Sunday, April 14 2024
Cricket
ವಿದೇಶ

ಪಕ್ಷದ ಸೋಲನ್ನು ಗಂಭೀರವಾಗಿ ಪರಿಗಣಿಸಬೇಕು: ಸೋನಿಯಾ ಗಾಂಧಿ

Photo Credit :

ಪಕ್ಷದ ಸೋಲನ್ನು ಗಂಭೀರವಾಗಿ ಪರಿಗಣಿಸಬೇಕು: ಸೋನಿಯಾ ಗಾಂಧಿ

ನವದೆಹಲಿ:ಇತ್ತೀಚೆಗೆ ಹಲವಾರು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾದ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸೂಕ್ತ ಪಾಠದ ಮೂಲಕ ವಾಸ್ತವವನ್ನು ಎದುರಿಸಬೇಕಾಗಿದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯುಸಿ)ಯ ಮಹತ್ವದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯುಪಿಎ ಅಧ್ಯಕ್ಷೆ ಸೋನಿಯಾ, ಚುನಾವಣೆಯಲ್ಲಿ ಪಕ್ಷ ಸೋಲಲು ಕಾರಣವಾಗುವ ಪ್ರತಿಯೊಂದು ಅಂಶಗಳನ್ನು ಪರಿಶೀಲಿಸಲು ಒಂದು ಸಣ್ಣ ಗುಂಪನ್ನು ರಚಿಸುವ ಉದ್ದೇಶ ಹೊಂದಿರುವುದಾಗಿ ಹೇಳಿದರು.

ನಮ್ಮ ತೀವ್ರ ಹಿನ್ನಡೆಯನ್ನು ಗಂಭೀರವಾಗಿ ಪರಿಣಗಣಿಸಬೇಕು. ನಾವು ತುಂಬಾ ನಿರಾಸೆಗೊಂಡಿದ್ದೇವೆ ಎಂದು ಹೇಳುವುದು ಸೂಕ್ತವಲ್ಲ, ಪಕ್ಷದ ಸೋಲಿಗೆ ಕಾರಣವಾದ ಪ್ರತಿಯೊಂದು ಅಂಶಗಳನ್ನು ವಿಮರ್ಶಿಸಲು ಸಣ್ಣ ತಂಡ ಮಾಡಲು ಉದ್ದೇಶಿಸಿದ್ದು, ಆ ಗುಂಪು ತಕ್ಷಣವೇ ವರದಿ ನೀಡಬೇಕು ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಅಸ್ಸಾಂ ಮತ್ತು ಕೇರಳದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿದ್ದ ಸರ್ಕಾರಗಳನ್ನು ಸೋಲಿಸಲು ಏಕೆ ವಿಫಲರಾಗಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ನಾವು ಅಸ್ತಿತ್ವವನ್ನೇ ಕಳೆದುಕೊಂಡಿದ್ದೇವೆ. ಇದರ ಬಗ್ಗೆ ಪಕ್ಷ ಪುನರಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸೋನಿಯಾ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು