News Karnataka Kannada
Saturday, April 20 2024
Cricket
ವಿದೇಶ

ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವು

Photo Credit :

ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ನ್ಯುಮೋನಿಯಾದಿಂದ ಕಾಯಿಲೆಯಿಂದ ಬಳಲುತ್ತಿದ್ದ ಕೋಟೆ ಬಡಾವಣೆ ನಿವಾಸಿ ಹರೀಶ್ ಅವರನ್ನು ನಗರದ ಕೆ.ಆರ್.ಎಸ್ ಆಸ್ಪತ್ರೆಗೆ ಸೋಮವಾರ ಮಧ್ಯಾಹ್ನ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಆಕ್ಸಿಜನ್ ನೀಡಿದ್ದು, ಆಕ್ಸಿಜನ್ ಖಾಲಿಯಾಗಿದ್ದರಿಂದ ವೈದ್ಯರು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು. ಆ ಬಳಿಕ ಕುಟುಂಬಸ್ಥರು ಹರೀಶ್ ಅವರನ್ನು ನಗರದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಕಾಲ ಚಿಕಿತ್ಸೆ ನೀಡುತ್ತಿರುವಾಗಲೇ ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ಹೋಲಿಗ್ರಾಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇನ್ನೂ ತಂದೆ ಹರೀಶ್ ಮೃತಪಟ್ಟ ಸುದ್ದಿಯನ್ನು ಪಿಯುಸಿ ಓದುತ್ತಿರುವ ಮಗ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪತಿ ಮೃತ ಪಟ್ಟ ಸುದ್ದಿ ಕೇಳಿ ಪತ್ನಿ ಸೌಮ್ಯ ಕೂಡ ವಿಷಯ ತಿಳಿದ ಹತ್ತೇ ನಿಮಿಷದಲ್ಲಿ ಹೃದಯಾಘಾತಕ್ಕೊಳಗಾಗಿ ಮನೆಯಲ್ಲಿ ಮೃತಪಟ್ಟಿದ್ದಾರೆ. ಹರೀಶ್ ಹಾಗೂ ಸೌಮ್ಯಾ ದಂಪತಿಗೆ ಕೋವಿಡ್ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಪ್ಪ-ಅಮ್ಮನನ್ನು ಕಳೆದುಕೊಂಡ ಮಗ ಹಾಗೂ ಸಂಬಂಧಿಕರ ನೋವು ನೋಡುಗರ ಕಣ್ಣಲ್ಲೂ ನೀರು ತರಿಸುವಂತಿತ್ತು.
ತೋಟದಲ್ಲಿ ಕೂಲಿ ಕೆಲಸ ಮಾಡುವ 19 ಕುಟುಂಬಗಳ 28 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಇಡೀ ಒಂದು ಹಳ್ಳಿಯೇ ಆತಂಕಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರುವ ತಹಸೀಲ್ದಾರ್ ಕಾಂತರಾಜು ನೇತೃತ್ವದ ತಂಡ ಗ್ರಾಮಸ್ಥರಿಗೆ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದೆ. ಪಾಸಿಟಿವ್ ಬಂದಿರುವ 20 ಕುಟುಂಬಗಳಿಗೂ ತಿಂಗಳಿಗೆ ಆಗುವಷ್ಟು ರೇಷನ್ ನೀಡಿ 15 ದಿನಗಳ ಕಾಲ ಯಾರೂ ಮನೆಯಿಂದ ಹೊರಬಾರದಂತೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು