News Karnataka Kannada
Monday, April 22 2024
Cricket
ವಿದೇಶ

ಬಂಗಾಲದಲ್ಲಿ ಮತ್ತಿಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ

Photo Credit :

ಬಂಗಾಲದಲ್ಲಿ ಮತ್ತಿಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ

ಕೋಲ್ಕತ್ತ: ‘ಟಿಎಂಸಿ ಗೂಂಡಾಗಳು ಶುಕ್ರವಾರ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದ ಹಲವೆಡೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ’ ಎಂದು ಬಿಜೆಪಿ ಆರೋಪಿಸಿದೆ.
‘ಮಾಲ್ಡಾ ಜಿಲ್ಲೆಯ ಮೋಠಾಬರಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಕುಟುಂಬದವರಾದ ಮನೋಜ್ ಮಂಡಲ್ (21) ಮಷತ್ತು ಚೈತನ್ಯ ಮಂಡಲ್ (19) ಎಂಬ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇಬ್ಬರನ್ನೂ ಹತ್ಯೆ ಮಾಡಿ, ಆನಂತರ ಮರಕ್ಕೆ ನೇಣುಹಾಕಲಾಗಿದೆ. ಉತ್ತರ 24 ಪರಗಣ ಜಿಲ್ಲೆಯಲ್ಲಿ ಟಿಎಂಸಿ ಗೂಂಡಾಗಳಿಂದ ಹಲ್ಲೆಗೆ ಒಳಗಾಗಿದ್ದ ಪಕ್ಷದ ಇನ್ನೊಬ್ಬ ಕಾರ್ಯಕರ್ತ ಶುಕ್ರವಾರ ಮೃತಪಟ್ಟಿದ್ದಾನೆ’ ಎಂದೂ ಬಿಜೆಪಿ ಹೇಳಿದೆ.
ಪೂರ್ವ ವರ್ಧಮಾನ್, ಕೂಚ್‌ಬಿಹಾರ್ ಮತ್ತು ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎಬಿವಿಪಿ ಕಾರ್ಯಕರ್ತರು ಮತ್ತು ನಾಯಕರ ಮೇಲೇಯೂ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿನ ಚುನಾವಣೋತ್ತರ ಹಿಂಸಾಚಾರ, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ ಎಂದು ಕೋಲ್ಕತ್ತ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಐವರು ನ್ಯಾಯಮೂರ್ತಿಗಳ ಪೀಠವು ಈ ಸೂಚನೆ ನೀಡಿದೆ. ‘ಎಲ್ಲಿ ಹಿಂಸಾಚಾರ ನಡೆಯಿತು ಮತ್ತು ಅದನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಸೋಮವಾರದ ಒಳಗೆ ನೀಡಿ’ ಎಂದು ಹೈಕೋರ್ಟ್‌ ಸೂಚಿಸಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಪರಿಶೀಲನೆ ನಡೆಸಲು ಬಂದಿರುವ ಕೇಂದ್ರಗೃಹ ಸಚಿವಾಲಯದ ತಂಡವು ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಶುಕ್ರವಾರ ಭೇಟಿ ಮಾಡಿದೆ. ಮೇ 3ರಂದು ನಡೆದ ಹಿಂಸಾಚಾರ, ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ವರದಿ ನೀಡಿ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು