News Karnataka Kannada
Tuesday, April 23 2024
Cricket
ವಿದೇಶ

ಬಾಂಗ್ಲಾದೇಶಿ ಯುವತಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡೇಟು

Photo Credit :

ಬಾಂಗ್ಲಾದೇಶಿ ಯುವತಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು, : ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್‌ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.
ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಂಧಿತ ಅರೋಪಿಗಳು ಅಕ್ರಮವಾಗಿ ದೇಶಕ್ಕೆ ನುಸುಳಿದ್ದಾರೆ. ಪಶ್ಚಿಮ ಬಂಗಾಳ ಮೂಲಕ ಅಕ್ರಮವಾಗಿ ದೇಶಕ್ಕೆ ನುಸುಳಿ ಇಲ್ಲಿ ನಕಲಿ ಆಧಾರ್ ಕಾರ್ಡ್‌ಗಳನ್ನು ಮಾಡಿಸಿಕೊಂಡು ನಾನಾ ಅಕ್ರಮ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ಆರೋಪಿಗಳನ್ನು ದೇಶದಿಂದ ಗಡಿಪಾರು ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು