News Karnataka Kannada
Tuesday, April 23 2024
Cricket
ವಿದೇಶ

ಬಿಹಾರದಲ್ಲಿ ಮೇ 25ರ ವರೆಗೆ ಲಾಕ್ ಡೌನ್ ವಿಸ್ತರಣೆ

Photo Credit :

ಬಿಹಾರದಲ್ಲಿ ಮೇ 25ರ ವರೆಗೆ ಲಾಕ್ ಡೌನ್ ವಿಸ್ತರಣೆ

ಪಾಟ್ನಾ: ಬಿಹಾರದಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮೇ 25 ರವರೆಗೆ ವಿಸ್ತರಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

ಮೇ 5 ರಿಂದ 15 ರವರೆಗೆ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು ಉನ್ನತ ಮಟ್ಟದ ಸಭೆ ನಡೆಸಿದ ನಂತರ ನಿತೀಶ್ ಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ.

ಸಚಿವ ಸಂಪುಟ ಸಹೋದ್ಯೋಗಿಗಳು ಮತ್ತು ಅಧಿಕಾರಿಗಳೊಂದಿಗೆ ಬಿಹಾರದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಪರಿಶೀಲಿಸಲಾಯಿತು. ಲಾಕ್‌ಡೌನ್‌ ಉತ್ತಮ ಫಲಿತಾಂಶ ನೀಡಿರುವುದು ಸ್ಪಷ್ಟವಾಗಿದೆ. ಆದ್ದರಿಂದ, ಲಾಕ್ ಡೌನ್ ಅನ್ನು ಇನ್ನೂ 10 ದಿನಗಳವರೆಗೆ ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೇ 16 ರಿಂದ 25 ರವರೆಗೆ ಲಾಕ್ ಡೌನ್ ವಿಸ್ತರಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು