News Karnataka Kannada
Sunday, April 21 2024
Cricket
ವಿದೇಶ

ಭಾರತದಲ್ಲಿ ಸತತ ಎರಡನೇ ದಿನ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ

Photo Credit :

ಭಾರತದಲ್ಲಿ ಸತತ ಎರಡನೇ ದಿನ ಕೋವಿಡ್ ಪ್ರಕರಣಗಳಲ್ಲಿ ಇಳಿಕೆ

ನವದೆಹಲಿ: ದೇಶದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 37,04,099 ಕ್ಕೆ ಇಳಿದಿದ್ದು, ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೋವಿಡ್ ಪ್ರಕರಣಗಳು ಮತ್ತು 4,205 ಸಾವುಗಳು ವರದಿಯಾಗಿದ್ದು, ಸತತ ಎರಡನೇ ದಿನ ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

 

24 ಗಂಟೆಗಳ ಅವಧಿಯಲ್ಲಿ 11,122 ಪ್ರಕರಣಗಳು ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಈಗ ದೇಶದ ಒಟ್ಟು ಸೋಂಕುಗಳ ಶೇಕಡಾ 15.87 ರಷ್ಟಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯ ಪ್ರದೇಶದಲ್ಲಿ ಭಾರತದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.82.51 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

 

ಇದೇ ಅವಧಿಯಲ್ಲಿ 3,55,338 ಜನರು ಚೇತರಿಸಿಕೊಂಡಿದ್ದು, ದೇಶದಲ್ಲಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 2,33,40,938 ಕ್ಕೆ ತಲುಪಿದೆ. ಈ ಪೈಕಿ 37,04,099 ಸಕ್ರಿಯ ಪ್ರಕರಣಗಳಾದರೆ, 2,54,197 ಸೋಂಕಿತರು ಈವರೆಗೆ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಇದುವರೆಗೆ 1,93,82,642 ಜನರು ಚೇತರಿಸಿಕೊಂಡಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು