News Karnataka Kannada
Tuesday, April 23 2024
Cricket
ವಿದೇಶ

ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ವಿಧಿವಶ

Photo Credit :

ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ವಿಧಿವಶ

 ನವದೆಹಲಿ: ದೇಶದ ಮಾಜಿ ಅಟಾರ್ನಿ ಜನರಲ್ ಹಾಗು ಹಿರಿಯ ಕಾನೂನು ತಜ್ಞ ಸೋಲಿ ಜೆ. ಸೊರಬ್ಜಿ (91) ನಿಧನರಾಗಿದ್ದಾರೆ.1930ರಲ್ಲಿ ಜನಿಸಿದ ಸೊರಾಬ್ಜಿ 1953 ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ತಮ್ಮ ಕಾನೂನು ಅಭ್ಯಾಸವನ್ನು ಪ್ರಾರಂಭಿಸಿದ್ದರು. ಅವರನ್ನು ಸುಪ್ರೀಂಕೋರ್ಟ್‌ನ ಹಿರಿಯ ವಕೀಲರನ್ನಾಗಿ 1971 ರಲ್ಲಿ ಬಾಂಬೆ ಹೈಕೋರ್ಟ್ ನೇಮಿಸಿತ್ತು.ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಸಂರಕ್ಷಣೆಗಾಗಿ ಮಾಡಿರುವ ಸೇವೆಯ ಹಿನ್ನೆಲೆಯಲ್ಲಿ ಸೊರಾಬ್ಜಿಗೆ 2002 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿತ್ತು. ಅವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದರು.ಸೊರಾಬ್ಜಿ ಸುಮಾರು ಏಳು ದಶಕಗಳ ಕಾಲ ಕಾನೂನು ವೃತ್ತಿಯಲ್ಲಿದ್ದು, ಎರಡು ಬಾರಿ ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಮೊದಲ ಬಾರಿ 1989-90 ಮತ್ತು ಎರಡನೆಯ ಬಾರಿ 1998 ರಿಂದ 2004 ರವರೆಗೆ ಮೊದಲ ಎನ್​ಡಿಎ ಸರ್ಕಾರದ ಅವಧಿಯಲ್ಲಿ ಎಜಿ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಆಸ್ಟ್ರೇಲಿಯಾ’ ಗೌರವಕ್ಕೂ ಇವರು ಪಾತ್ರರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು