News Karnataka Kannada
Saturday, April 20 2024
Cricket
ವಿದೇಶ

ಮತ ಎಣಿಕೆ ಕೇಂದ್ರಗಳ ಬಳಿ ಸಂಭ್ರಮಾಚರಣೆ ಬೇಡ: ಡಿಎಂಕೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್

Photo Credit :

ಮತ ಎಣಿಕೆ ಕೇಂದ್ರಗಳ ಬಳಿ ಸಂಭ್ರಮಾಚರಣೆ ಬೇಡ: ಡಿಎಂಕೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್

ಚೆನ್ನೈ: ಮೇ 2 ರಂದು ನಡೆಯಲಿರುವ ಮತ ಎಣಿಕೆ ಕೇಂದ್ರಗಳ ಬಳಿ ಹೆಚ್ಚಿನ ಜನ ಸೇರದಂತೆ ಅಥವಾ ಎಲ್ಲಿಯೂ ಸಂಭ್ರಮಾಚರಣೆ ಮಾಡದಂತೆ ಡಿಎಂಕೆ ಪಕ್ಷದ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ಕಾರ್ಯಕರ್ತರಲ್ಲಿ ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

 

ತಮಿಳುನಾಡಿನಲ್ಲಿ ಕೋವಿಡ್-19 ಸಾಂಕ್ರಾಮಿಕದ ತೀವ್ರತೆ ಹೆಚ್ಚಿರುವ ಸಂದರ್ಭದಲ್ಲಿ ಅನುಕೂಲಕರ ಫಲಿತಾಂಶ ಬರತೊಡಗಿದ್ದಂತೆಯೇ ಕಾರ್ಯಕರ್ತರು ಮತ ಎಣಿಕೆ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು, ಅಥವಾ ಎಲ್ಲಿಯೂ ಸಂಭ್ರಮಾಚರಣೆ ಮಾಡಬಾರದು, ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕೆಂದು ಅವರು ಹೇಳಿದ್ದಾರೆ.

 

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದು ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಊಹಿಸಿರುವಂತೆಯೇ, ಪಕ್ಷದ ಕಾರ್ಯಕರ್ತರ ಜೀವ ಮುಖ್ಯವಾಗಿದ್ದು, ಮನೆಯಲ್ಲಿಯೇ ಸಂಭ್ರಮಾಚರಣೆ ಮಾಡಿ ಎಂದಿರುವ ಸ್ಟಾಲಿನ್, ಇತರ ಪಕ್ಷಗಳಿಗೂ ಇದೇ ರೀತಿಯಾಗಿ ಮನವಿ ಮಾಡಿದರು. ಬೀದಿಗಳು ನಿರ್ಜನವಾಗಿರಲಿ, ಮನಸುಗಳು ಸಂತೋಷದಿಂದ ತುಂಬಿರಲಿ ಎಂದು ಹೇಳಿದ್ದಾರೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು