News Karnataka Kannada
Tuesday, April 23 2024
Cricket
ವಿದೇಶ

ಮನೆಯಲ್ಲೇ ಕೊರೋನ ಪರೀಕ್ಷೆ ಮಾಡಿಕೊಳ್ಳಲು ಬಿಡುಗಡೆ ಆಯ್ತು ಕೋವಿಸೆಲ್ಫ್‌ ಕಿಟ್‌

Photo Credit :

ಮನೆಯಲ್ಲೇ ಕೊರೋನ ಪರೀಕ್ಷೆ ಮಾಡಿಕೊಳ್ಳಲು ಬಿಡುಗಡೆ ಆಯ್ತು ಕೋವಿಸೆಲ್ಫ್‌ ಕಿಟ್‌

ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಇದಕ್ಕೆ ಯಾವುದೇ ವೈದ್ಯಕೀಯ ಸಿಬ್ಬಂದಿಯ ನೆರವು ಅವಶ್ಯಕತೆ ಇಲ್ಲ ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಗುರುವಾರ ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್​ನ ಬಗ್ಗೆ ವಿವರಣೆ ನೀಡಿದೆ.ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ ಮಾಡಿಕೊಳ್ಳಬಹುದಾದ ಕೊವಿಸೆಲ್ಫ್ ಎಂಬ ಕಿಟ್ ಒಂದನ್ನು ಐಸಿಎಂಆರ್ ಅನುಮೋದಿಸಿದೆ. ಈ ವಿಧಾನದ ಪರೀಕ್ಷೆಗೆ ಕೇವಲ ಮೂಗಿನ ದ್ರವ ಮಾತ್ರ ಅಗತ್ಯವಾಗಿದೆ. ಈ ವಿಧಾನದ ಮೂಲಕ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.
ಕೊವಿಸೆಲ್ಫ್ ವಿಧಾನದ ಮೂಲಕ 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರು ತಮಗೆ ತಾವೇ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ. 2 ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಹಿರಿಯರ ಸಹಾಯದಿಂದ ಈ ಪರೀಕ್ಷೆಯನ್ನು ಮನೆಯಲ್ಲೇ ಮಾಡಿಕೊಳ್ಳಬಹುದಾಗಿದೆ. ಈ ಕಿಟ್ ಲಭ್ಯವಿದೆ ಎಂದು ಎಲ್ಲರೂ ಬೇಕಾಬಿಟ್ಟಿ ಈ ವಿಧಾನ ಬಳಸುವಂತಿಲ್ಲ. ಬದಲಾಗಿ, ಯಾರಲ್ಲಿ ಕೊರೊನಾ ಲಕ್ಷಣ ಇದೆ ಮತ್ತು ಯಾರು ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆಯೋ ಅಂಥವರು ಈ ವಿಧಾನದ ಮೂಲಕ ಕೊರೊನಾ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.
ಕೊವಿಸೆಲ್ಫ್ ಕಿಟ್​ನೊಂದಿಗೆ ಅದರ ಮೂಲಕ ಕೊರೊನಾ ಪರೀಕ್ಷೆ ನಡೆಸುವ ವಿಧಾನದ ವಿವರಣೆ ಇರುವ ಮ್ಯಾನುವಲ್ ಕೂಡ ಲಭ್ಯವಿರಲಿದೆ. ಹೆಚ್ಚುವರಿಯಾಗಿ ಐಸಿಎಮ್​ಆರ್, ಪರೀಕ್ಷೆ ನಡೆಸಬೇಕಾದ ವಿಧಾನದ ಹಂತವನ್ನು ವಿಡಿಯೋ ಮೂಲಕವೂ ವಿವರಿಸಿದೆ. ಈ ಕಿಟ್​ನಲ್ಲಿ ಮೂಗಿನ ದ್ರವ ಸಂಗ್ರಹಿಸುವ ಉಪಕರಣ, ಎಕ್ಸ್​ಟ್ರಾಕ್ಷನ್ ಟ್ಯೂಬ್ ಮತ್ತು ಒಂದು ಟೆಸ್ಟ್ ಕಾರ್ಡ್ ಹೊಂದಿರುವ ಪೌಚ್ ಇರಲಿದೆ.
ಕೊವಿಸೆಲ್ಫ್ ಮೂಲಕ ಪರೀಕ್ಷೆ ನಡೆಸಲು, ಬಳಕೆದಾರರು ಮೈಲ್ಯಾಬ್ (mylab) ಅಪ್ಲಿಕೇಷನ್​ನ್ನು ತಮ್ಮ ಮೊಬೈಲ್​ನಲ್ಲಿ ಹೊಂದಿರಬೇಕಿದೆ. ಮೂಗಿನ ದ್ರವ ಪಡೆದು ಟ್ಯೂಬ್​ಗೆ ಅದನ್ನು ಹಾಕಬೇಕು. ಟ್ಯೂಬ್​ನಲ್ಲಿ ಮೂಗಿನ ದ್ರವ ಇಳಿಯುವಂತೆ ನೋಡಿಕೊಳ್ಳಬೇಕು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು