News Karnataka Kannada
Friday, April 12 2024
Cricket
ವಿದೇಶ

ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾ ಸೋಂಕಿಗೆ ಬಲಿ

Photo Credit :

ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾ ಸೋಂಕಿಗೆ ಬಲಿ

ಕೋಲ್ಕತಾ, : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ನಡುವೆ ಶುಕ್ರವಾರ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ 24 ಗಂಟೆಗಳಲ್ಲಿ ರಾಜ್ಯದಲ್ಲಿ 136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 12,993ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆಶಿಮ್ ಬ್ಯಾನರ್ಜಿಯವಕು ಕೋಲ್ಕತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,04,32,898 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,66,207 ಜನರು ಬಲಿಯಾಗಿದ್ದಾರೆ.
ಇದರ ಹೊರತಾಗಿ ದೇಶದಲ್ಲಿ ಇನ್ನೂ 36,73,802 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 18,04,57,579 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು