News Karnataka Kannada
Monday, April 22 2024
Cricket
ವಿದೇಶ

ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಹೋದರ ಪೊಲೀಸ್ ವಶಕ್ಕೆ!

Photo Credit :

ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಹೋದರ ಪೊಲೀಸ್ ವಶಕ್ಕೆ!

ರಾಯಚೂರು, : ಚುನಾವಣಾ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ ಕಾರಣ ಮಸ್ಕಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಹಾಗೂ ಅವರ ಸಹೋದರ ಸಿದ್ದನಗೌಡ ತುರವಿಹಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಸ್ಕಿ ವಿಧಾನಸಭೆ ಉಪ ಚುನಾವಣೆಯ ಮತ ಎಣಿಕೆ ವೇಳೆ ಚುನಾವಣಾ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಹಾಗೂ ಅವರ ಸಹೋದರ ಸಿದ್ದನಗೌಡ ತುರವಿಹಾಳ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.ನಂತರ ಪೊಲೀಸರೊಂದಿಗೂ ಜಗಳವಾಡಿದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಹಾಗೂ ಅವರ ಸಹೋದರ ಸಿದ್ದನಗೌಡ ತುರವಿಹಾಳ್ ಅವರನ್ನು ಬಂಧಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ರಾಯಚೂರು ಜಿಲ್ಲಾಧಿಕಾರಿ ಸೂಚಿಸಿದರು. ಬಂಧನಕ್ಕೊಳಗಾದ ನಂತರ ಮಾತನಾಡಿದ ಸಿದ್ದನಗೌಡ ತುರವಿಹಾಳ್, ಚುನಾವಣಾಧಿಕಾರಿಗಳು ಮತ ಎಣಿಕೆಯ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಆರೋಪಿಸಿದರು. ಸಿದ್ದನಗೌಡ ತುರವಿಹಾಳ್ ಅವರು ಮಸ್ಕಿ ಭಾಗದಲ್ಲಿ ಮುಂಚೂಣಿ ನಾಯಕರಾಗಿದ್ದಾರೆ.ಮಸ್ಕಿ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, 10ನೇ ಸುತ್ತಿನ ವೇಳೆಗೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು 20,906 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ 32,322 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು