News Karnataka Kannada
Thursday, April 25 2024
ವಿದೇಶ

ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಎನ್‌ಕೌಂಟರ್‌: 15 ನಕ್ಸಲರ ಹತ್ಯೆ

Photo Credit :

ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿ ಎನ್‌ಕೌಂಟರ್‌: 15 ನಕ್ಸಲರ ಹತ್ಯೆ

ಮುಂಬೈ: ‘ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಪೊಲೀಸ್‌ ಪಡೆಯ ಸಿ–60 ಕಮಾಂಡೊಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಕನಿಷ್ಠ 15 ನಕ್ಸಲರು ಹತರಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.‘ಎಟಪಲ್ಲಿಯ ಕೊಟ್ಟಾಮಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ನಕ್ಸಲರು ಸಭೆ ಸೇರಿದ್ದ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದೆ’ ಎಂದು ಡಿಐಜಿ ಸಂದೀಪ್‌ ಪಾಟೀಲ್‌ ಅವರು ಮಾಹಿತಿ ನೀಡಿದರು.
‘ನಿಖರ ಮಾಹಿತಿ ಮೇರೆಗೆ ಸಿ–60 ಕಮಾಂಡೊಗಳನ್ನು ಒಳಗೊಂಡ ಪೊಲೀಸ್‌ ಪಡೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಕ್ಸಲರು ಮೊದಲು ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿಯಾಗಿ ನಡೆದ ಗುಂಡಿನ ಚಕಮಕಿಯಲ್ಲಿ 15 ನಕ್ಸಲರು ಹತರಾಗಿದ್ದಾರೆ. ಈ ನಡುವೆ ಕೆಲವು ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಂಕಿತ್‌ ಗೋಯಲ್‌ ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು