News Karnataka Kannada
Wednesday, April 17 2024
Cricket
ವಿದೇಶ

ಮಹಾರಾಷ್ಟ್ರದ ಥಾಣೆಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 4 ರೋಗಿಗಳು ಸಜೀವ ದಹನ

Photo Credit :

ಮಹಾರಾಷ್ಟ್ರದ ಥಾಣೆಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 4 ರೋಗಿಗಳು ಸಜೀವ ದಹನ

ಮುಂಬೈ : ಮಹಾರಾಷ್ಟ್ರದ ಥಾಣೆಯ ಆಸ್ಪತ್ರೆಯಲ್ಲಿ ಮತ್ತೊಂದು ಬೆಂಕಿ ಅವಘಡ ನಡೆದಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ಆಸ್ಪತ್ರೆಯಲ್ಲಿ ನಡೆದ 3ನೇ ಅಗ್ನಿ ದುರಂತ ಇದಾಗಿದೆ. ಥಾಣೆಯ ಮುಂಬ್ರಾ ಪ್ರದೇಶದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ 3.40ಕ್ಕೆ ಬೆಂಕಿ ಸ್ಫೋಟಗೊಂಡಿದೆ. ಈ ದುರಂತದಲ್ಲಿ 4 ರೋಗಿಗಳು ಸಾವನ್ನಪ್ಪಿದ್ದಾರೆ. 20 ರೋಗಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಈ ಆಸ್ಪತ್ರೆಯಲ್ಲಿ ಯಾವುದೇ ಕೊರೋನಾ ರೋಗಿಗಳು ಚಿಕಿತ್ಸೆ ಪಡೆಯುತ್ತಿರಲಿಲ್ಲ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ 3 ಅಗ್ನಿಶಾಮಕದಳದ ವಾಹನಗಳು ಮತ್ತು 5 ಆ್ಯಂಬುಲೆನ್ಸ್​ಗಳು ಆಗಮಿಸಿವೆ. ಗಾಯಗೊಂಡ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಆಸ್ಪತ್ರೆಯಲ್ಲಿ 6 ರೋಗಿಗಳು ಐಸಿಯುನಲ್ಲಿದ್ದರು ಮತ್ತು 20 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ 4 ರೋಗಿಗಳು ಆಸ್ಪತ್ರೆಯೊಳಗೆ ಸಜೀವ ದಹನವಾಗಿದ್ದಾರೆ.
ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಕಳೆದ ವಾರ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಾಸೈನಲ್ಲಿನ ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡು 13 ಕೊರೋನಾ ರೋಗಿಗಳು ಸಾವನ್ನಪ್ಪಿದ್ದರು. ಆ ರೋಗಿಗಳ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ 2 ಲಕ್ಷ ರೂ, ಮಹಾರಾಷ್ಟ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿತ್ತು.ಪಲ್ಘಾರ್​ ಆಸ್ಪತ್ರೆಯ ದುರ್ಘಟನೆಗೂ ಕೇವಲ 24 ಗಂಟೆ ಮೊದಲು ಮಹಾರಾಷ್ಟ್ರದ ನಾಸಿಕ್​ನಲ್ಲಿ ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕರ್ ಸೋರಿಕೆಯಾಗಿ 24 ರೋಗಿಗಳು ಸಾವನ್ನಪ್ಪಿದ್ದರು. ಈ ಆಸ್ಪತ್ರೆಯಲ್ಲಿ 171 ಕೋವಿಡ್-19 ರೋಗಿಗಳಿದ್ದರು. ಅವರಲ್ಲಿ 67 ರೋಗಿಗಳಿಗೆ ಆಕ್ಸಿಜನ್​ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಆಮ್ಲಜನಕ ಸೋರಿಕೆಯಿಂದಾಗಿ 24 ರೋಗಿಗಳು ಮೃತಪಟ್ಟಿದ್ದರು. ನಾಸಿಕ್‌ ನಗರದ ಜಾಕಿರ್ ಹುಸೇನ್ ಆಸ್ಪತ್ರೆ ಕೊರೊನಾ ಸೋಂಕಿತ ರೋಗಿಗಳಿಗೆ ಮೀಸಲಾಗಿದೆ. ಸುಮಾರು 150 ರೋಗಿಗಳಿಗೆ ಆಮ್ಲಜನಕದ ಅಗತ್ಯವಿತ್ತು, ಅವರೆಲ್ಲರೂ ವೆಂಟಿಲೇಟರ್‌ಗಳಲ್ಲಿದ್ದರು. ಅದರಲ್ಲಿ 24 ಕೊರೊನಾ ಸೋಂಕಿತರು ಆಮ್ಲಜನಕ ಸ್ಥಗಿತದಿಂದ ಸಾವನ್ನಪ್ಪಿದ್ದರು. ಟ್ಯಾಂಕರ್‌ನಿಂದ ಟ್ಯಾಂಕ್‌ಗಳಲ್ಲಿ ಆಮ್ಲಜನಕವನ್ನು ತುಂಬುತ್ತಿರುವಾಗ ಈ ಘಟನೆ ಸಂಭವಿಸಿತ್ತು.
ದೇಶದಲ್ಲಿ ಕಳೆದೊಂದು ವಾರದಿಂದ ಕೊರೋನಾ ಆಸ್ಪತ್ರೆಗಳಲ್ಲಿ ಸಾಲು ಸಾಲು ಅಗ್ನಿ ದುರಂತಗಳು ನಡೆಯುತ್ತಿವೆ. 2 ದಿನಗಳ ಹಿಂದೆ ಗುಜರಾತ್​ನ ಸೂರತ್​ನಲ್ಲು ಕೂಡ ಖಾಸಗಿ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು16 ಕೊರೋನಾ ರೋಗಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಸೂರತ್​ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು, ತಕ್ಷಣ ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿತ್ತು. ಇಲ್ಲಿನ ಐಸಿಯುನಲ್ಲಿ 16 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು