News Karnataka Kannada
Monday, April 22 2024
Cricket
ವಿದೇಶ

ಮೇ 10ರಿಂದ ಲಾಕ್ ಡೌನ್; ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ

Photo Credit :

ಮೇ 10ರಿಂದ ಲಾಕ್ ಡೌನ್; ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ

ಬೆಂಗಳೂರು, ; ಕರ್ನಾಟಕ ಸರ್ಕಾರ ಮೇ 10ರ ಸೋಮವಾರದಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಆದರೆ ಕೆಲವು ಅಂಶಗಳಲ್ಲಿ ಬದಲಾವಣೆ ಮಾಡಲಾಗಿದೆ. ಶನಿವಾರ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಮದುವೆಯಲ್ಲಿ 40 ಜನರು ಭಾಗವಹಿಸಬಹುದು. ಮೊದಲು ವಿವಾಹ ಕಾರ್ಯಕ್ರಮದಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.
ಲಾಕ್ ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ಮನೆಯಲ್ಲಿ ನಡೆಸಬಹುದು ಮತ್ತು ಅದರಲ್ಲಿ 40 ಜನರು ಪಾಲ್ಗೊಳ್ಳಬಹುದು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ.ಈಗಾಗಲೇ ನಿಗದಿಯಾಗಿರುವ ವಿವಾಹಗಳನ್ನು ಕಲ್ಯಾಣ ಮಂಟಪದಲ್ಲಿ ನಡೆಸಲು ಸಾಧ್ಯವಿಲ್ಲ. ಹಿಂದೆ ಇದ್ದ ನಿಯಮದಂತೆ ಸ್ಥಳೀಯ ಆಡಳಿವು ವಿವಾಹದಲ್ಲಿ ಪಾಲ್ಗೊಳ್ಳುವ ಜನರಿಗೆ ಪಾಸ್ ವಿತರಣೆ ಮಾಡಲಿದೆ.ಪರಿಷ್ಕತ ಮಾರ್ಗಸೂಚಿಯ ಪ್ರಕಾರ ಕಬ್ಬಿಣದ ಅದಿರು ಗಣಿಗಾರಿಕೆಗೆ ಹಾಗೂ ಸಿಮೆಂಟ್‌ಗೆ ಬಳಸುವ ಲೈಮ್ ಸ್ಟೋನ್ ತಯಾರಿಕೆಗೆ ಅನುಮತಿ ನೀಡಲಾಗಿದೆ. ಉಳಿದಂತೆ ಶುಕ್ರವಾರ ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯಲಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು