News Karnataka Kannada
Monday, April 22 2024
Cricket
ವಿದೇಶ

ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ

Photo Credit :

ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, : ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು, ಮಂಡ್ಯ, ಕಾರ್ಕಳ, ಬೇಲೂರು, ಗುಬ್ಬಿ, ರಾಮನಗರ, ಮಾಣಿ, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಮೂಡುಬಿದಿರೆ, ಅಥಣಿ, ಮದ್ದೂರು, ಹುಂಚದಕಟ್ಟೆ, ಭದ್ರಾವತಿ, ಭಾಗಮಂಡಲ, ಕುಷ್ಟಗಿ, ಶ್ರವಣಬೆಳಗೊಳ, ಧರ್ಮಸ್ಥಳ, ಚಿಂತಾಮಣಿ, ಹೊಸಪೇಟೆ, ಗದಗ, ಕುಣಿಗಲ್,ಮಾಗಡಿ, ಪಾಂಡವಪುರ, ಮಲವಳ್ಳಿ, ಬಂಡೀಪುರ, ಆಗುಂಬೆ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.
ಯಾಸ್ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕೆಲ ಭಾಗಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಿದೆ. ಭದ್ರಕ ಚಾಂದ್‌ಬಾಲಿಯಲ್ಲಿ 288.3 ಮಿ.ಮೀ ಮಳೆಯಾಗಿದೆ.ರಾಜ್ಯದ ಒಟ್ಟು 314ರಲ್ಲಿ 36 ತಾಲೂಕುಗಳಲ್ಲಿ ಕನಿಷ್ಠ 110 ಮಿ.ಮೀನಿಂದ ಗರಿಷ್ಠ 304 ಮಿ.ಮೀವರೆಗೆ ಮಳೆಯಾಗಿದೆ. 37 ತಾಲೂಕುಗಳಲ್ಲಿ 50 ರಿಂದ 100 ಮಿ.ಮೀನಷ್ಟು ಮಳೆಯಾಗಿದೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿಕೆ ಜೇನ ತಿಳಿಸಿದ್ದಾರೆ.ಮುಂದಿನ 48 ಗಂಟೆಗಳಲ್ಲಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು