News Karnataka Kannada
Monday, April 15 2024
Cricket
ವಿದೇಶ

ಮೋದಿ, ಅಮಿತ್ ಶಾ, ರೂಪಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಎಫ್ಐಆರ್ ದಾಖಲು

Photo Credit :

ಮೋದಿ, ಅಮಿತ್ ಶಾ, ರೂಪಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವನ ವಿರುದ್ಧ ಎಫ್ಐಆರ್ ದಾಖಲು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಗುಜರಾತ್ ಸಿಎಂ ವಿಜಯ್ ರೂಪಾನಿ, ಡಿಸಿಎಂ ನಿತಿನ್ ಪಟೇಲ್ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ಬರೆದಿದ್ದ ಫೇಸ್ಬುಕ್ ಬಳಕೆದಾರ ಕಪಿಲ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಾನಹಾನಿ ಮತ್ತು ಶಾಂತಿ ಭಂಗಕ್ಕೆ ಯತ್ನ ಆಧಾರದಲ್ಲಿ ದೂರು ದಾಖಲಾಗಿದೆ.

ಅಹಮದಾಬಾದ್ ಡಿಸಿಪಿ ಅವರ ಕಟ್ಟುನಿಟ್ಟಿನ ಆದೇಶದ ಅನ್ವಯ, ಸೋಶಿಯಲ್ ಮೀಡಿಯಾದ ಮೇಲೆ ಕಣ್ಣಿಡಲಾಗಿದೆ. ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿರುವ ಆಧಾರದಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಹರೀಶ್ ಚಂದ್ರ ಸಿಂಗ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಹೊಗಳುತ್ತ, ಕೊರೋನಾ ಮತ್ತು ಜಿಎಸ್‌ ಟಿ ವಿಚಾರ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ್ದ ಕಪಿಲ್ ಕುಮಾರ್ ಅವರ ಮೇಲೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು