News Karnataka Kannada
Monday, April 22 2024
Cricket
ವಿದೇಶ

‘ಯಸ್’ ಚಂಡಮಾರುತ ಹಾನಿ ; 1,000 ಕೋಟಿ ತುರ್ತು ನೆರವು ಘೋಷಿಸಿದ ಪ್ರಧಾನಿ

Photo Credit :

'ಯಸ್'  ಚಂಡಮಾರುತ ಹಾನಿ ; 1,000 ಕೋಟಿ ತುರ್ತು ನೆರವು ಘೋಷಿಸಿದ ಪ್ರಧಾನಿ

ನವದೆಹಲಿ: ‘ಯಸ್‌’ ಚಂಡಮಾರುತದಿಂದ ಹಾನಿ ಅನುಭವಿಸಿರುವ ರಾಜ್ಯಗಳಿಗೆ, ಪ್ರಧಾನಿ ನರೇಂದ್ರ ಮೋದಿ ಅವರು ₹1000 ಕೋಟಿ ತುರ್ತು ಪರಿಹಾರ ಘೋಷಿಸಿದ್ದಾರೆ. ಇದರಲ್ಲಿ ₹500 ಕೋಟಿ ಒಡಿಶಾಗೆ ಹಾಗೂ ಉಳಿದ ₹500 ಕೋಟಿಯನ್ನು ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ ರಾಜ್ಯಗಳಿಗೆ ಈ ಕೂಡಲೇ ಬಿಡುಗಡೆ ಮಾಡಲಾಗುವುದು’ ಎಂದು ಪ್ರಧಾನಮಂತ್ರಿ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಯಸ್ ಚಂಡಮಾರುತದಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಡೆಸಿದರು. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಬಳಿಕ, ಸಂಜೆ ಮೋದಿ ಅವರು ಈ ಪರಿಹಾರ ಘೋಷಿಸಿದ್ದಾರೆ. ಚಂಡಮಾರುತದಿಂದಾಗಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹2ಲಕ್ಷ ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ ₹50,000 ಪರಿಹಾರವನ್ನೂ ಮೋದಿ ಅವರು ಘೋಷಿಸಿದ್ದಾರೆ.
‘ಚಂಡಮಾರುತದಿಂದ ಆಗಿರುವ ಹಾನಿಯ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಅಂತರ್‌ ಸಚಿವಾಲಯದ ತಂಡವನ್ನು ಕಳುಹಿಸುವುದು. ಈ ತಂಡ ನೀಡುವ ವರದಿಯ ಆಧಾರದಲ್ಲಿ ಮುಂದಿನ ಪರಿಹಾರ ಮೊತ್ತವನ್ನು ನಿರ್ಧರಿಸಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು