News Karnataka Kannada
Thursday, April 25 2024
Cricket
ವಿದೇಶ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.73.9ರಷ್ಟು ಇಳಿಕೆ

Photo Credit :

ರಾಜ್ಯದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.73.9ರಷ್ಟು ಇಳಿಕೆ

ಬೆಂಗಳೂರು, : ರಾಜ್ಯದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.73.9ರಷ್ಟು ಇಳಿಕೆ ಕಂಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಶೇ.98ರಷ್ಟಿದ್ದ ರಾಜ್ಯದ ಚೇತರಿಕೆ ಪ್ರಮಾಣ ಏಪ್ರಿಲ್ 30ರ ವೇಳೆಗೆ ಶೇ.73.9ಕ್ಕೆ ಇಳಿಕೆಯಾಗಿದೆ.ಶೇ.83.7 (37,99,266) ಚೇತರಿಕೆ ಪ್ರಮಾಣದೊಂದಿಗೆ ದೇಶದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ನಂತರ ಸ್ಥಾನವನ್ನು ಶೇ.80.3 (12,61,801) ಕೇರಳ ಪಡೆದುಕೊಂಡಿದೆ.
ಈ ಹಿಂದೆ ಚೇತರಿಕೆ ಪ್ರಮಾಣದಲ್ಲಿ ಇತರೆ ರಾಜ್ಯಗಳನ್ನು ಹಿಂದಿಕ್ಕಿದ್ದ ಕರ್ನಾಟಕ ದೇಶದಲ್ಲಿಯೇ ಮೂರನೇ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಇತರೆ ರಾಜ್ಯಗಳಿಗಿಂತಲೂ ಹಿಂದೆ ಉಳಿದಿದೆ.
ಸಾಕಷ್ಟು ಜನರಿಗೆ ಆರೋಗ್ಯ ಸೌಲಭ್ಯಗಳು ಲಭ್ಯವಾಗುತ್ತಿಲ್ಲ. ಇದರಿಂತ ರಾಜ್ಯದಲ್ಲಿ ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಕೊರೊನಾ ಎರಡನೇ ಅಲೆಯನ್ನು ಇತರೆ ರಾಷ್ಟ್ರಗಳು ಯಾವ ರೀತಿ ನಿಭಾಯಿಸುತ್ತಿವೆ ಎಂಬುದನ್ನೂ ನೋಡಬೇಕಿದೆ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚೆಚ್ಚು ಬಂಡವಾಳ ಹೂಡಬೇಕೆಂಬುದನ್ನು ತಿಳಿಸಲು ಪ್ರಸ್ತುತ ಪರಿಸ್ಥಿತಿಯೇ ದೊಡ್ಡ ಸಂದೇಶವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ತಮಿಳುನಾಡು ಶೇ.88.9, ದೆಹಲಿ ಶೇ.89.9, ಆಂಧ್ರಪ್ರದೇಶ ಶೇ.88.1, ಪಶ್ಚಿಮ ಬಂಗಾಳ ಶೇ.84.9, ಛತ್ತೀಸ್‌ಗಢ ಶೇ.82.3, ಉತ್ತರಪ್ರದೇಶದ ಶೇ.73.6ರಷ್ಟು ಚೇತರಿಕೆ ಪ್ರಮಾಣವನ್ನು ಹೊಂದಿದೆ.ಪರೀಕ್ಷೆಗಳ ಸಂಖ್ಯೆ ಹೆಚ್ಚಿಸುವುದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಶೀಘ್ರಗತಿಯಲ್ಲಿ ಹುಡುಕಿ ಚಿಕಿತ್ಸೆ ನೀಡುವುದರಿಂತ ಚೇತರಿಕೆ ಪ್ರಮಾಣ ಹೆಚ್ಚಳವಾಗಲಿದೆ ಎಂದು ತಜ್ಞರು ಹೇಳಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಸಾಕಷ್ಟು ಜನರು ಶೀಘ್ರಗತಿಯಲ್ಲಿ ಗಂಭೀರ ಸ್ಥಿತಿಗೆ ತಲುಪುತ್ತಿದ್ದಾರೆ. ಇದರಿಂದ ಗುಣಮುಖರಾಗಲು ಕಾಲಾವಕಾಶ ತೆಗೆದುಕೊಳ್ಳುತ್ತಿದೆ. ಹೀಗಾಗಿ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಕಡಿಮೆಯಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು