News Karnataka Kannada
Tuesday, April 16 2024
Cricket
ವಿದೇಶ

ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ: 9 ಉಗ್ರರ ಬಂಧನ

Photo Credit :

ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ: 9 ಉಗ್ರರ ಬಂಧನ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ ಬೆಳ್ಳಂಬೆಳಗ್ಗೆ ಭಯೋತ್ಪಾದನೆ ಮತ್ತು ಭಯೋತ್ಪಾದಕ ಜಾಲದ ವಿರುದ್ಧ ಬೃಹತ್ ಕಾರ್ಯಾಚರಣೆಯನ್ನು ಕೈಗೊಂಡು, ಅಲ್ ಖೈದಾ ಉಗ್ರಗಾಮಿ ಸಂಘಟನೆಗೆ ಸೇರಿದ 9 ಮಂದಿಯನ್ನು ಬಂಧಿಸಿದೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆ ಮತ್ತು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಲ್ ಖೈದಾ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಸಿಬ್ಬಂದಿ ಬಂಧಿಸಿದ್ದಾರೆ. ದೇಶದ ಹಲವು ಕಡೆಗಳಲ್ಲಿ ಸಂಭಾವ್ಯ ದಾಳಿ ನಡೆಸಲು ಇವರು ಸಂಚು ರೂಪಿಸಿದ್ದರು. ಇವರ ಬಂಧನದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೇರಳದಲ್ಲಿ ಇಂದು ಬಂಧಿತರಾದವರನ್ನು ಮುರ್ಷಿದ್ ಹಸನ್, ಇಯಾಕುಬ್ ಬಿಸ್ವಾಸ್ ಮತ್ತು ಮೊಸರಫ್ ಹುಸೇನ್ ಎಂದು ಗುರುತಿಸಲಾಗಿದ್ದು ಇವರೆಲ್ಲರೂ ಎರ್ನಾಕುಲಂ ನಿವಾಸಿಗಳು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಸೆರೆ ಸಿಕ್ಕವರನ್ನು ನಜ್ಮುಸ್ ಸಾಕಿಬ್, ಅಬು ಸುಫಿಯಾನ್, ಮೈನುಲ್ ಮೊಂಡಲ್, ಲಿಯು ಯೀನ್ ಅಹ್ಮದ್, ಅಲ್ ಮಮುನ್ ಕಮಲ್ ಮತ್ತು ಅತಿತುರ್ ರೆಹಮಾನ್ ಎಂದು ಗುರುತಿಸಲಾಗಿದೆ.

ಬಂಧಿತ ಉಗ್ರರು ಹಣ ಸಂಗ್ರಹಿಸಿ ದೆಹಲಿಗೆ ಪ್ರಯಾಣಿಸಿ ಬಂದೂಕು, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ಯೋಜನೆ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ. ಪಾಕಿಸ್ತಾನ ಮೂಲದ ಅಲ್ ಖೈದಾ ಭಯೋತ್ಪಾದಕ ಸಂಘಟನೆ ಇವರನ್ನು ಸೋಷಿಯಲ್ ಮೀಡಿಯಾಗಳ ಮೂಲಕ ಸಂಪರ್ಕಿಸಿ ನೇಮಕ ಮಾಡಿಕೊಂಡಿತ್ತು. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲು ಹಲವು ದಿನಗಳಿಂದ ಸಂಚು ರೂಪಿಸುತ್ತಿತ್ತು ಎಂದು ತಿಳಿದುಬಂದಿದೆ.

ಬಂಧಿತರ ಬಳಿ ಇದ್ದ ಡಿಜಿಟಲ್ ಉಪಕರಣ, ದಾಖಲೆಗಳು, ಜಿಹಾದಿ ಸಾಹಿತ್ಯ, ಹರಿತವಾದ ಆಯುಧಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ತಯಾರಿಸುವ ಮಾರ್ಗದರ್ಶಿ ಪುಸ್ತಕಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು