News Karnataka Kannada
Sunday, April 14 2024
Cricket
ವಿದೇಶ

ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಕ್ಕೆ ತೆರಳಿದ ಸೋನಿಯಾಗಾಂಧಿ

Photo Credit :

ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಕ್ಕೆ ತೆರಳಿದ ಸೋನಿಯಾಗಾಂಧಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮೊದಲೇ ಕಾಂಗ್ರೆಸ್‌ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ತೆರಳಿದ್ದಾರೆ.

ಸೋನಿಯಾ ಗಾಂಧಿ ನಿಯಮಿತ ವೈದ್ಯಕೀಯ ಪರೀಕ್ಷೆಗೆ ಅಮೆರಿಕಕ್ಕೆ ತೆರಳಿದ್ದು, ಪುತ್ರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸೋನಿಯಾ ಅವರೊಂದಿಗೆ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೂಕ್ತ ಚಿಕಿತ್ಸೆ ಬಳಿಕ ಸೋನಿಯಾರಾಹುಲ್ ಇಬ್ಬರೂ ಭಾರತಕ್ಕೆ ಮರಳಿ ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದೆ. ಸೋನಿಯಾ ಎರಡು ವಾರಗಳ ಕಾಲ ಅಮೆರಿಕದಲ್ಲೇ ಇರಲಿದ್ದು, ರಾಹುಲ್ ಕೇವಲ ಒಂದೇ ವಾರದಲ್ಲಿ ಮರಳಿ ಭಾರತಕ್ಕೆ ಬರಲಿದ್ದಾರೆ. ಸಂಸತ್ತಿನ ಕಲಾಪದಲ್ಲಿ ಪಾಲ್ಗೊಳ್ಳಲು ರಾಹುಲ್ ಬೇಗ ಮರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೊರೋನಾ ವೈರಸ್ ಹಾವಳಿಯಿಂದಾಗಿ ಸೋನಿಯಾ ಗಾಂಧಿ ಅವರ ನಿಯಮಿತ ಆರೋಗ್ಯ ತಪಾಸಣೆ ವಿಳಂಬವಾಗಿದ್ದು, ಇದೀಗ ಅಮೆರಿಕಕ್ಕೆ ತೆರಳಿ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು