News Karnataka Kannada
Tuesday, April 16 2024
Cricket
ವಿದೇಶ

ಶಾಸಕ ಅಪ್ಪಚ್ಚು ರಂಜನ್‌ ರಿಂದ ಸೋಂಕಿತರಿಗೆ ಯೋಗ ಪಾಠ

Photo Credit :

 ಶಾಸಕ ಅಪ್ಪಚ್ಚು ರಂಜನ್‌ ರಿಂದ ಸೋಂಕಿತರಿಗೆ  ಯೋಗ ಪಾಠ

ಶಾಸಕ ಅಪ್ಪಚ್ಚು ರಂಜನ್‌ ರಿಂದ ಸೋಂಕಿತರಿಗೆ ಯೋಗ ಪಾಠ
ಮಡಿಕೇರಿ ; ಇಂದು ಬೆಳ್ಳಂಬೆಳಗ್ಗೆ ಮಡಿಕೇರಿ ಸಮೀಪ ಇರುವ ನವೋದಯದ ಶಾಲೆಯಲ್ಲಿ ತೆರೆದಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ ಶಾಸಕರು, ಕೋವಿಡ್ ಕೇರ್ ಸೆಂಟರ್ ನಲ್ಲಿರುವ ಸೋಂಕಿತರಿಗೆ ಯೋಗ ಹೇಳಿಕೊಟ್ಟರು. ಇತ್ತೀಚಿನ ದಿನಗಳಲ್ಲಿ ಸೋಂಕಿತರು ಉಸಿರಾಟದ ತೊಂದರೆಯಿಂದ ಬಳಲುತ್ತಿರುತ್ತಾರೆ. ಹೀಗಾಗಿ ಬೆಳಗ್ಗೆ ಎದ್ದು ಯೋಗ ಧ್ಯಾನ ಮಾಡಬೇಕು ಎಂದರು. ಕೋವಿಡ್‌ ಎಂಬ ಮಹಾಮಾರಿಯನ್ನು ಓಡಿದಲು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದೇ ಅತ್ಯಂತ ಮುಖ್ಯ ಎಂದ ಶಾಸಕರು ಕೋವಿಡ್ 19 ಇಂದು ನಾಳೆಗೆ ತೊಲಗುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು ಇತರೆ ತೊಂದರೆ ಉಂಟಾದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ಪರೀಕ್ಷಿಕೊಳ್ಳಬೇಕು. ಯಾರೂ ಆತಂಕಗೊಳ್ಳಬಾರದು ಎಂದರಲ್ಲದೆ ಪ್ರತಿಯೊಬ್ಬರೂ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಕೋವಿಡ್ 19 ದೂರ ಇರಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರ ವಹಿಸುವುದು ಅಗತ್ಯ, ಸೋಂಕಿತರು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಔಷಧಿ ಪಡೆಯಬೇಕು. ಧೈರ್ಯವಾಗಿರಬೇಕು, ವಾಕ್ (ನಡಿಗೆ) ಮತ್ತು ವ್ಯಾಯಾಮ ಮಾಡಬೇಕು, ಬಿಸಿಯಾದ ಆಹಾರ ಸೇವಿಸಬೇಕು. ಬಿಸಿ ನೀರು ಕುಡಿಯಬೇಕು ಎಂದು ಶಾಸಕರು ಸಲಹೆ ಮಾಡಿದರು.
ಬಳಿಕ ನವೋದಯ ಶಾಲೆಯ ಕೋವಿಡ್ ಆರೈಕೆ ಕೇಂದ್ರಕ್ಕೆ ಸರಸ್ವತಿ ಡಿಇಡಿ ಕಾಲೇಜಿನಿಂದ ಪೂರೈಕೆಯಾಗುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದರು, ಇಲ್ಲಿನ ಸ್ವಚ್ಚತೆ, ಅಡುಗೆ ತಯಾರಿ ಮಾಡುವುದನ್ನು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗಿನಲ್ಲಿ ಇಂದು ಬೆಳಿಗ್ಗೆ 8 ಘಂಟೆ ವರೆಗೆ ಕಳೆದ 24 ಘಂಟೆಗಳಲ್ಲಿ 390 ಸಕ್ರಿಯ ಪ್ರಕರಣಗಳು ವರದಿ ಆಗಿದ್ದು ಇದೇ ಅವಧಿಯಲ್ಲಿ 508 ಮಂದಿ ಆಶ್ಪತ್ರೆಯಿಂದ ಗುಣಮುಖರಾಗಿ ಹೋಗಿದ್ದಾರೆ. ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 2982 ಇದೆ. ಈವರೆಗೂ ಎರಡನೇ ಅಲೆಯಲ್ಲಿ 278 ಜನರು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು