News Karnataka Kannada
Sunday, April 21 2024
Cricket
ವಿದೇಶ

ಸಂಸದ ರಘು ರಾಮ್ ಕೃಷ್ಣರಾಜು ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶ

Photo Credit :

ಸಂಸದ ರಘು ರಾಮ್ ಕೃಷ್ಣರಾಜು  ವೈದ್ಯಕೀಯ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ವೈಎಸ್‌ಆರ್ ಕಾಂಗ್ರೆಸ್‌ನ ಬಂಡಾಯ ಸಂಸದ ಕೆ. ರಘು ರಾಮಕೃಷ್ಣ ರಾಜು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ರಜಾಕಾಲದ ಪೀಠವು ರಾಜು ಅವರನ್ನು ಮುಂದಿನ ಆದೇಶದವರೆಗೆ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಯಲ್ಲಿರಿಸಬೇಕೆಂದು ನಿರ್ದೇಶನ ನೀಡಿದೆ.

ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಂದ ನೇಮಕವಾಗಿರುವ ನ್ಯಾಯಾಂಗ ಅಧಿಕಾರಿಯ ಸಮ್ಮುಖದಲ್ಲೇ ರಾಜು ಅವರ ವೈದ್ಯಕೀಯ ಪರೀಕ್ಷೆ ನಡೆಯಬೇಕೆಂದೂ ನ್ಯಾಯಪೀಠವು ಆದೇಶಿಸಿದೆ.

ಸೇನಾ ಆಸ್ಪತ್ರೆಯ ಮುಖ್ಯಸ್ಥರ ನೇತೃತ್ವದಲ್ಲಿ ಮೂವರು ವೈದ್ಯರ ಮಂಡಳಿಯು ರಾಜು ಅವರ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಿದೆ.

ವೈದ್ಯಕೀಯ ಪರೀಕ್ಷೆಯ ವಿಡಿಯೊ ಚಿತ್ರೀಕರಣ ಮಾಡಿ ಅದರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ತಲುಪಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿದೆ.‌

ದೆಹಲಿ ಹೈಕೋರ್ಟ್ ನಿರ್ದೇಶನದಂತೆ ರಾಜು ಅವರಿಗೆ ವೈ ಶ್ರೇಣಿಯ ಒದಗಿಸಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ. ‌

ತಮಗೆ ವೈ ಶ್ರೇಣಿಯ ಭದ್ರತೆ ಒದಗಿಸಬೇಕೆಂದು ಕೋರಿ ರಾಜು ಅವರು ಕಳೆದ ವರ್ಷ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು