News Karnataka Kannada
Sunday, April 21 2024
Cricket
ವಿದೇಶ

ಸರ್ಕಾರದ ವತಿಯಿಂದ ಕಾವೇರಿ ನದಿಯಲ್ಲಿ 1,000 ಕೊವಿಡ್-19 ಮೃತ ಅಸ್ಥಿ ವಿಸರ್ಜನೆ

Photo Credit :

ಸರ್ಕಾರದ ವತಿಯಿಂದ ಕಾವೇರಿ ನದಿಯಲ್ಲಿ 1,000 ಕೊವಿಡ್-19 ಮೃತ ಅಸ್ಥಿ ವಿಸರ್ಜನೆ

ಬೆಂಗಳೂರು, : ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವದಕ್ಕೂ ಜನರು ಭಯ ಪಡುವಂತಾ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಬುಧವಾರ ಸ್ವತಃ ಕಂದಾಯ ಸಚಿವ ಆರ್ ಅಶೋಕ್ ಮೃತ ಅಸ್ಥಿ ವಿಸರ್ಜನೆ ಮಾಡಲಿದ್ದಾರೆ.
ಕೊವಿಡ್-19 ಸೋಂಕಿನಿಂದ ಮೃತಪಟ್ಟ 1,000 ಜನರ ಅಸ್ಥಿಯನ್ನು ಸರ್ಕಾರದ ವತಿಯಿಂದ ಅಸ್ಥಿ ವಿಸರ್ಜನೆ ಕಾರ್ಯ ನಡೆಸಲಾಗುತ್ತಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳವಾಡಿಯ ಅನ್ನಪೂರ್ಣೇಶ್ವರಿ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ವಿಸರ್ಜನೆ ಮಾಡಲಾಗುತ್ತದೆ.
ಸಾಮಾನ್ಯವಾಗಿ ಮೃತರ ಅಂತ್ಯಸಂಸ್ಕಾರದ ನಂತರದಲ್ಲಿ ಅಸ್ಥಿಯನ್ನು ಹರಿಯುವ ನದಿಯಲ್ಲಿ ವಿಸರ್ಜಿಸಿದರೆ ಮೃತ ಆತ್ಮಕ್ಕೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಸರ್ಕಾರದ ವತಿಯಿಂದಲೇ ಕಂದಾಯ ಸಚಿವ ಆರ್ ಅಶೋಕ್ ಅಸ್ಥಿ ವಿಸರ್ಜಿಸಲಿದ್ದಾರೆ. ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟವರ ಚಿತಾಭಸ್ಮವನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಸಂಬಂಧಿಕರಿಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಸಾಮಾನ್ಯವಾಗಿ ಮೃತರ ಅಂತ್ಯಕ್ರಿಯೆ ನಡೆದ ದಿನ ಅಥವಾ ಮರುದಿನವೇ ಚಿತಾಭಸ್ಮವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ ಕೆಲವು ಪ್ರಕರಣಗಳಲ್ಲಿ ಸಂಬಂಧಿಕರು ಅಸ್ಥಿಯನ್ನು ತೆಗೆದುಕೊಂಡು ಹೋಗುವುದಕ್ಕೂ ಹಿಂದೇಟು ಹಾಕಿದ್ದರು. ಹೀಗಾಗಿ 1200 ಮೃತರ ಚಿತಾಭಸ್ಮವನ್ನು ಹಾಗೇ ಶೇಖರಿಸಿ ಇಡಲಾಗಿತ್ತು. ಬುಧವಾರ ಮೃತರ ಆತ್ಮಕ್ಕೆ ಮುಕ್ತಿ ದೊರಕಿಸುವ ಉದ್ದೇಶದಿಂದ ಸರ್ಕಾರವೇ ಅಸ್ಥಿ ವಿಸರ್ಜನೆಗೆ ಮುಂದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು