News Karnataka Kannada
Saturday, April 13 2024
Cricket
ವಿದೇಶ

ಸಿ.ಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ಸರ್ಕಾರ

Photo Credit :

ಸಿ.ಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ಸರ್ಕಾರ

ಬೆಂಗಳೂರು, ಸಿಟಿ ಸ್ಕ್ಯಾನಿಂಗ್‌ ದುಬಾರಿ ಹಣ ವಸೂಲಿಗೆ ಕಡಿವಾಣ ಹಾಕಿ ಸರ್ಕಾರ ದರ ನಿಗದಿ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಟಿ ಸ್ಕ್ಯಾನ್ ಮಾಡಲಾಗುವುದು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1500 ರೂ ದರ ನಿಗಡಿ ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತು ಸಚಿವ ಸುಧಾಕರ್ ಮಾತನಾಡಿ, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ವ್ಯವಸ್ಥೆಯಲ್ಲಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 49058 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 328 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18943 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು