News Karnataka Kannada
Saturday, April 20 2024
Cricket
ವಿದೇಶ

ಸುಶಾಂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ಹೆಚ್ಚಾಗುತ್ತಿದೆ: ಬಿಜೆಪಿ ಸಂಸದ ದುಬೆ

Photo Credit :

ಸುಶಾಂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ಹೆಚ್ಚಾಗುತ್ತಿದೆ: ಬಿಜೆಪಿ ಸಂಸದ ದುಬೆ

ಪಟ್ನಾ: ತನಿಖೆಗೆ ತೆರಳಿರುವ ಬಿಹಾರದ ಐಪಿಎಸ್ ಅಧಿಕಾರಿ ಬಿನಾಯ್ ತಿವಾರಿ ಅವರನ್ನು ಒತ್ತಾಯಪೂರ್ವಕವಾಗಿ ಕ್ವಾರಂಟೈನ್ ಗೆ ಒಳಪಡಿಸಿರುವುದನ್ನು ನೋಡಿದರೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಂಶಯಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ತಿಳಿಸಿದರು.

ಬಿಎಂಸಿ ತಿವಾರಿ ಅವರನ್ನು ಕ್ವಾರಂಟೈನ್ ಗೆ ಒಳಪಡಿಸಿರುವುದನ್ನು ನೋಡಿದರೆ ಸುಶಾಂತ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಎನ್ ಐಎ ಮತ್ತು ಜಾರಿ ನಿರ್ದೇಶನಾಲಯವು ಈ ಬಗ್ಗೆ ತನಿಖೆಗೆ ಮುಂದಾಗಬೇಕು. ಕೇಂದ್ರ ಸರ್ಕಾರವು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ಅವರು ಆಗ್ರಹಿಸಿದರು.

ಐಪಿಎಸ್ ಅಧಿಕಾರಿ ತನಿಖೆಗೆ ತೆರಳಿದ ವೇಳೆ ಕ್ವಾರಂಟೈನ್ ಗೆ ಒಳಪಡಿಸಿರುವುದು ದೊಡ್ಡ ತಪ್ಪು. ಇದರಿಂದ ಪ್ರಕರಣದ ಬಗ್ಗೆ ಸಂಶಯಗಳು ಮೂಡುತ್ತದೆ. ಕೇಂದ್ರ ಸರ್ಕಾರವು ಆದಷ್ಟು ಬೇಗ ಮಧ್ಯ ಪ್ರವೇಶಿಸಬೇಕು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು