News Karnataka Kannada
Tuesday, April 16 2024
Cricket
ವಿದೇಶ

ಸೆಂಟ್ರಲ್ ವಿಸ್ಟಾ ಯೋಜನೆಯ ಹಣವನ್ನು ಜನರ ಜೀವ ಉಳಿಸಲು ಬಳಸಿ: ಪ್ರಿಯಾಂಕ ವಾದ್ರಾ

Photo Credit :

ಸೆಂಟ್ರಲ್ ವಿಸ್ಟಾ ಯೋಜನೆಯ ಹಣವನ್ನು ಜನರ ಜೀವ ಉಳಿಸಲು ಬಳಸಿ: ಪ್ರಿಯಾಂಕ ವಾದ್ರಾ

ನವದೆಹಲಿ: ಸೆಂಟ್ರಲ್‌ ವಿಸ್ಟಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಸೇರಿದಂತೆ ದೇಶದ ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿರುವ ಎಲ್ಲ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಕೋವಿಡ್‌ನಿಂದ ಸಂಕಷ್ಟದಲ್ಲಿರುವ ಜನರ ಜೀವ ಉಳಿಸಲು ವಿನಿಯೋಗಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಡಿಸೆಂಬರ್ 2022ರೊಳಗೆ ಸೆಂಟ್ರಲ್ ವಿಸ್ಟಾ ಯೋಜನೆಯಡಿ ಪ್ರಧಾನಿಯವರ ನೂತನ ಗೃಹ ನಿರ್ಮಾಣ ಕೆಲಸ ಪೂರ್ಣಗೊಳಿಸುವಂತೆ ಕೇಂದ್ರ ಲೋಕೋಪಯೋಗಿ ಇಲಾಖೆಗೆ ಸೂಚಿಸಿರುವುದರ ಕುರಿತು ಪ್ರಿಯಾಂಕಾ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಕೋವಿಡ್‌ ಲಸಿಕೆ ಮತ್ತು ಆಮ್ಲಜನಕದ ಕೊರತೆಯಿಂದ ಜನರು ಸಂಕಷ್ಟ ಎದುರಿಸುತ್ತಿರುವ ವೇಳೆಯಲ್ಲಿ ಇಂಥ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿರುವ ಹಣವನ್ನು ಜನರ ಜೀವ ಉಳಿಸಲು ಬಳಸಬೇಕು’ ಎಂದು ಒತ್ತಾಯಿಸಿದ್ದಾರೆ.

ಕೋವಿಡ್‌ನಿಂದಾಗಿ ದೇಶದಾದ್ಯಂತ ಏಕಕಾಲಕ್ಕೆ ಆಮ್ಲಜನಕ, ಹಾಸಿಗೆ, ಲಸಿಕೆ, ಔಷಧಗಳ ಕೊರತೆಯಿಂದ ಜನರು ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರ ನೂತನ ನಿವಾಸಕ್ಕಾಗಿ ವ್ಯಯಿಸುವ ₹13ಸಾವಿರ ಕೋಟಿ ಹಣವನ್ನು ಜನರ ಜೀವ ಉಳಿಸುವ ಕಾರ್ಯಗಳಿಗೆ ಬಳಸುವಂತೆ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿಯವರ ನೂತನ ನಿವಾಸ ಡಿಸೆಂಬರ್ 2022ರೊಳಗೆ ಪೂರ್ಣಗೊಳ್ಳುವ ಸುದ್ದಿ ಹಾಗೂ ದೇಶದಲ್ಲಿ ಲಸಿಕೆ, ಆಮ್ಲಜನಕ ಕೊರತೆ ಇರುವ ಸುದ್ದಿಗಳ ತುಣುಕುಗಳನ್ನು ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ಇಂಥ ವೆಚ್ಚಗಳು ಸರ್ಕಾರದ ಆದ್ಯತೆ ಬೇರೆ ದಿಕ್ಕಿನಲ್ಲಿ ಸಾಗುತ್ತಿದೆ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸುತ್ತದೆ’ ಎಂದು ಪ್ರಿಯಾಂಕಾ ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು