News Karnataka Kannada
Friday, April 19 2024
Cricket
ವಿದೇಶ

ಸೋಂಕಿನಿಂದ ಸಾವು ಹೆಚ್ಚುತ್ತಿದೆ, ಲಸಿಕೆ ಕಡಿಮೆಯಾಗುತ್ತಿದೆ: ರಾಹುಲ್ ಗಾಂಧಿ

Photo Credit :

ಸೋಂಕಿನಿಂದ ಸಾವು ಹೆಚ್ಚುತ್ತಿದೆ, ಲಸಿಕೆ ಕಡಿಮೆಯಾಗುತ್ತಿದೆ: ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿ ಕೋವಿಡ್-19 ನಿಂದ ಸಾವುಗಳು ಹೆಚ್ಚಾಗುತ್ತಿದ್ದರೆ, ಲಸಿಕೆಗಳು ಕಡಿಮೆಯಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಮಾತ್ರ ಜನರ ಗಮನ ಬೇರೆಡೆಗೆ ತಿರುಗಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಕೋವಿಡ್ ವ್ಯಾಕ್ಸಿನೇಷನ್‌ಗಳ ಕೊರತೆ ಮತ್ತು ಕೊರೋನಾ ವೈರಸ್‌ನಿಂದಾಗಿ ದೈನಂದಿನ ಸಾವಿನ ಸಂಖ್ಯೆಯಲ್ಲಿನ ಹೆಚ್ಚಳವನ್ನು ತೋರಿಸುವ ಗ್ರಾಫ್‌ಗಳನ್ನು ಸಹ ರಾಹುಲ್ ಗಾಂಧಿ ಹಂಚಿಕೊಂಡಿದ್ದಾರೆ.

ಲಸಿಕೆಗಳು ಕಡಿಮೆಯಾಗುತ್ತಿವೆ ಮತ್ತು ಕೋವಿಡ್ ಸಾವುಗಳು ಹೆಚ್ಚುತ್ತಿವೆ. ಕೇಂದ್ರ ಸರ್ಕಾರದ ನೀತಿ – ಗಮನವನ್ನು ಬೇರೆಡೆಗೆ ತಿರುಗಿಸಿ, ಸುಳ್ಳು ಹರಡಿ, ಸತ್ಯವನ್ನು ಮರೆಮಾಚುತ್ತಿದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಒಂದೇ ದಿನದಲ್ಲಿ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ 4,529 ಸಾವುಗಳು ವರದಿಯಾಗಿವೆ, ಇದರೊಂದಿಗೆ ಕೊರೋನಾ ಸಾವಿನ ಸಂಖ್ಯೆ 2,83,248 ಕ್ಕೆ ತಲುಪಿದೆ.ಕಳೆದ 24 ಗಂಟೆಯಲ್ಲಿ ಹೊಸದಾಗಿ 2.67 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು